Breaking News

ಮಾಧ್ಯಮ ಕಣ್ಗಾವಲು ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಭೇಟಿ

Spread the love

ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಗೆ ಸಂಬಂಧಿಸಿದ ಸುದ್ದಿ ಮತ್ತು ಜಾಹೀರಾತುಗಳ ಮೇಲೆ ನಿಗಾ ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರಿಶ್ ಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಉಪ ಚುನಾವಣೆ ಹಿನ್ನೆಲೆಯಲ್ಲಿ ನಗರದ “ವಾರ್ತಾಭವನ” ದಲ್ಲಿ ಆರಂಭಿಸಲಾಗಿರುವ ಮಾಧ್ಯಮ ಕಣ್ಗಾವಲು ಕೇಂದ್ರ(ಮೀಡಿಯಾ ಮಾನಿಟರಿಂಗ್ ಸೆಲ್)ಕ್ಕೆ ಗುರುವಾರ(ಮಾ.25) ಭೇಟಿ ನೀಡಿ ಅವರು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳು ಟಿವಿ, ಕೇಬಲ್ ಟಿವಿ, ಸಾಮಾಜಿಕ ಜಾಲತಾಣ, ಸಿನಿಮಾ ಮಂದಿರ, ಎಲ್‌ಇ.ಡಿ. ವಾಹನದ ಮೂಲಕ ಪ್ರಚಾರ ಕೈಗೊಳ್ಳಬೇಕಾದರೆ ಜಾಹೀರಾತು ವಿಷಯವಸ್ತುವಿಗೆ ಸಂಬಂಧಿಸಿದಂತೆ ಕಡ್ಡಾಯವಾಗಿ ಎಂಸಿಎಂಸಿಯಿಂದ ಪೂರ್ವಾನುಮತಿ ಪಡೆಯಬೇಕು.

 

ಅನುಮತಿ ಪಡೆಯದಿದ್ದರೆ ಕಾನೂನು ಕ್ರಮ:

ಅನುಮತಿಯನ್ನು ಪಡೆಯದೇ ಪ್ರಚಾರ ಕೈಗೊಂಡರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅದೇ ರೀತಿ ಮಾಧ್ಯಮ ಸಂಸ್ಥೆಗಳು ಕೂಡ ಪೂರ್ವಾನುಮತಿಯನ್ನು ಪಡೆಯದ ಜಾಹೀರಾತುಗಳನ್ನು ಪ್ರಸಾರ ಮಾಡಬಾರದು. ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಯನ್ನು ಪಾಲಿಸುವ ಮೂಲಕ ಮುಕ್ತ ಮತ್ತು ನ್ಯಾಯಸಮ್ಮತ ಉಪ ಚುನಾವಣೆ ನಡೆಸಲು ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಮನವಿ ಮಾಡಿಕೊಂಡರು.

ಮಾಧ್ಯಮ ಕಣ್ಗಾವಲು ಕೇಂದ್ರದ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯ ನೋಡಲ್ ಅಧಿಕಾರಿ ಹಾಗೂ ವಾರ್ತಾ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಪ್ರಕಟ/ ಪ್ರಸಾರ ಆಗುವ ಎಲ್ಲ ಸುದ್ದಿ ಮತ್ತು ಜಾಹೀರಾತುಗಳ ಮೇಲೆ ನಿಗಾ ವಹಿಸಲಾಗುತ್ತಿದೆ ಎಂದು ಹೇಳಿದರು.

ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿ ನಿಸಾರ್ ಅಹ್ಮದ್, ಮಾಧ್ಯಮ ಕಣ್ಗಾವಲು ಕೇಂದ್ರದ ಸಿಬ್ಬಂದಿ ಶ್ರೀಮತಿ ಝಡ್.ಜಿ.ಸಯ್ಯದ್, ವಿನಾಯಕ ವಣ್ಣೂರ, ಕೆ.ಆರ್.ಕುಲಕರ್ಣಿ, ಎಂ.ಎಂ.ಪಾಟೀಲ, ಜಿ.ವೈ.ಕಾವಳೆ, ಕೆ.ಎಸ್.ಕಾಗಲೆ, ವಜ್ರಾ ಪಾಟೀಲ, ಜಿ.ಡಿ.ಹಳೆಮನಿ ಮತ್ತಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿದ ಸರ್ವೋತ್ತಮ ಜಾರಕಿಹೊಳಿ*

Spread the love ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ