Breaking News

ಇಂದು ಮಧ್ಯಾಹ್ನ 2 ಗಂಟೆಗೆ ವಕೀಲರ ಮೂಲಕ ದೂರು ದಾಖಲು: ಸಿಡಿ ಲೇಡಿ

Spread the love

ಬೆಂಗಳೂರು – ಕಳೆದ 24 ದಿನಗಳಿಂದ ತೀವ್ರ ಸಂಚಲನ ಮೂಡಿಸಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಇದೀಗ ಮತ್ತೊಂದು ಸ್ಪೋಟಕ ತಿರುವು ಸಿಕ್ಕಿದೆ.

ರಮೇಶ ಜಾರಕಿಹೊಳಿ ವಿರುದ್ಧ ಇಂದೇ ಪ್ರಕರಣ ದಾಖಲಿಸಲು ಸಿಡಿಯಲ್ಲಿರುವ ಯುವತಿ ನಿರ್ಧರಿಸಿದ್ದು, ವಕೀಲ ಜಗದೀಶ್ ಎನ್ನುವವರ ಮೂಲಕ ಮಧ್ಯಾಹ್ನ 2 ಗಂಟೆಗೆ ದೂರು ದಾಖಲಾಗಲಿದೆ.

ಯುವತಿಯ ಹಸ್ತಾಕ್ಷರದಲ್ಲೇ ದೂರು ದಾಖಲಿಸಲಾಗುವುದು ಎಂದು ಅವಳ ಪರ ವಕೀಲ ಜಗದೀಶ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಒಬ್ಬ ಪ್ರಭಾವಿ ರಾಜಕಾರಣಿ ವಿರುದ್ಧ ದೂರು ದಾಖಲಿಸುವುದು ಸುಲಭವಲ್ಲ. ಪೊಲೀಸರು ಹೇಗೆ ತೆಗೆದುಕೊಳ್ಳುತ್ತಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಹಾಗಾಗಿ ಈ ಮೊದಲು ದೂರು ದಾಖಲಿಸಲು ಸಾಧ್ಯವಾಗಿರಲಿಲ್ಲ ಎಂದು  ಜಗದೀಶ್ ತಿಳಿಸಿದ್ದಾರೆ.ಈ ಬೆಳವಣಿಗೆಯಿಂದಾಗಿ ರಮೇಶ ಜಾರಕಿಹೊಳಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದ್ದು, ಅವರ ಮುಂದಿನ ಹೆಜ್ಜೆ ಕುತೂಹಲ ಮೂಡಿಸಿದೆ.

 

 

 

 

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ