Breaking News

ಯುವತಿ ದೂರು ಕೊಡಲಿ; ನಾನು ಕಾನೂನಾತ್ಮಕವಾಗಿ ಹೋರಾಟ ನಡೆಸುತ್ತೇನೆ: ರಮೇಶ್ ಜಾರಕಿಹೊಳಿ,

Spread the love

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕ್ಷಣಕ್ಕೂ ಕುತೂಹಲ ಮೂಡಿಸುತಿದ್ದು, ಸಿಡಿಯಲ್ಲಿರುವ ಯುವತಿ ದೂರು ದಾಖಲಿಸುವುದಾಗಿ ಹೇಳುತ್ತಿದ್ದಂತೆ ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ, ಯುವತಿ ದೂರು ಕೊಡಲಿ ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

ಯುವತಿ 3ನೇ ಸಿಡಿ ಬಿಡುಗಡೆ ಮಾಡಿದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಯುವತಿ ಯಾವ ಕೇಸ್ ದಾಖಲಿಸುತ್ತಾಳೋ ದಾಖಲಿಸಿ. ನನ್ನ ವಿರುದ್ಧ ರೇಪ್ ಕೇಸ್ ದಾಖಲಿಸಿದರೂ ನಾನು ಕಾನೂನಾತ್ಮಕವಾಗಿ ಹೋರಾಟ ನಡೆಸಲು ಸಿದ್ಧನಿದ್ದೇನೆ. ಮುಂದಿನ ನಡೆ ಬಗ್ಗೆ ವಕೀಲರನ್ನು ಭೇಟಿಯಾಗಿ ಚರ್ಚಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಯುವತಿ ಅಂದೇ ಬಂದು ದೂರು ನೀಡಬೇಕಿತ್ತು. ಈಗ ವಕೀಲರ ಮೂಲಕ ದೂರು ನೀಡಲು ಮುಂದಾಗಿದ್ದಾಳೆ. ನಾನು ಮೊದಲೇ ಹೇಳಿದಂತೆ ಇದೊಂದು ಷಡ್ಯಂತ್ರ. ಯುವತಿ ಯಾವುದೇ ಕೇಸ್ ದಾಖಲಿಸಿದರೂ ಹೋರಾಡಲು ನಾನು ಮಾನಸಿಕವಾಗಿ ಸಿದ್ಧನಿದ್ದೇನೆ ಎಂದರು.


Spread the love

About Laxminews 24x7

Check Also

ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ.

Spread the love ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ. ವಿದೇಶ ಪ್ರವಾಸದಲ್ಲಿರುವ ಜನನಾಯಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ