Breaking News

‘CD’ ಪ್ರಕರಣ ನಮ್ಮ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ : ಸತೀಶ್ ಜಾರಕಿಹೊಳಿ

Spread the love

ಏ 17 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸೋಮವಾರ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದು ಕೈ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಸಿಡಿ ಪ್ರಕರಣ ನಮ್ಮ ಮೇಲೆ ಯಾವುದೇ ಪರಿಣಾಮ ಬೀರಲ್ಲ, ಇದೊಂದು ಅವಕಾಶ ನಮಗೆ ಸಿಕ್ಕಿದೆ. ಯಮಕನಮರಡಿ ಕ್ಷೇತ್ರದ ಜನರು ಈಗ ಬೆಂಬಲ ನೀಡಿದ್ದಾರೆ ಎಂದು ಸತೀಶ್ ಹೇಳಿದ್ದಾರೆ,.ಸಿಡಿ ಪ್ರಕರಣ ಪ್ರಸ್ತಾಪದಿಂದ ಲಾಭ ಆಗಲಿದೆ ಎಂದು ಅನಿಸಲ್ಲ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯವನ್ನು ಮುಂದಿಟ್ಟುಕೊಂಡು ಚುನಾವಣೆ ನಡೆಸುತ್ತೇವೆ ಎಂದು ಹೇಳಿದರು.

ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿ ದೂರು ನೀಡಿರುವುದು ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್ ಮೇಲೆ ಪ್ರಭಾವ ಬೀರಲ್ಲ, ನಮ್ಮ ಪಕ್ಷದ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ