Breaking News

ಡಿಕೆಎಸ್​ ವಿರುದ್ಧದ ಆರೋಪದ ಗಂಭೀರ ತನಿಖೆ ನಡೆಸಬೇಕು- ಪ್ರಹ್ಲಾದ್ ಜೋಶಿ

Spread the love

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರುದ್ಧ ಸಿಡಿ ಪ್ರಕರಣದ ಸಂತ್ರಸ್ತೆಯ ಯುವತಿಯ ಪೋಷಕರು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು.. ಯುವತಿಯ ಪೋಷಕರು ಡಿ.ಕೆ. ಶಿವಕುಮಾರ್ ಮೇಲೆ ಮಾಡಿರುವ ಆರೋಪ ವಿಚಾರ ಗಂಭೀರದುದ್ದು. ಈಗಾಗಲೇ ಸಿಡಿ ವಿಚಾರವಾಗಿ ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳಿಗೆ ಸಂಪೂರ್ಣವಾಗಿ ಅಧಿಕಾರ ನೀಡಲಾಗಿದೆ. ಎಸ್ ಐ ಟಿ ಡಿ.ಕೆ. ಶಿವಕುಮಾರ್ ವಿರುದ್ಧ ಮಾಡಿರುವ ಆರೋಪವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸಬೇಕು. ಒಟ್ಟಾರೆ ಗೊಂದಲಮಯವಾಗಿರುವ ಸಿಡಿ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತರಬೇಕು. ರಾಜ್ಯದಲ್ಲಿ ಎಸ್ ಐ ಟಿ ಚೆನ್ನಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ