ಗೋಕಾಕ : ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕೈವಾಡವಿದೆ ಎಂದು ರಮೇಶ್ ಆರೋಪಿಸಿದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಭಾನುವಾರ ಬೃಹತ್ ಪ್ರತಿಭಟನೆ ನಡೆಸಿದರು.
ಇಲ್ಲಿನ ಗೋಕಾಕ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ನಡೆಸಿ, ಡಿ.ಕೆ. ಶಿವಕುಮಾರ್ ಅವರ ಅಣುಕು ಶವ ಯಾತ್ರೆ ನಡೆಸಿ, ಕೈಯಲ್ಲಿ ಖಳನಾಯಕ ಡಿ.ಕೆ.ಶಿಗೆ ಶ್ರದ್ಧಾಂಜಲಿ ಎಂಬ ಬ್ಯಾನರ್ ಹಿಡಿದು ಆಕ್ರೋಶ ವ್ಯಕ್ತ ಪಡಿಸಿದರು.
ಇದೇ ವೇಳೆ ಮಾತನಾಡಿದ ಪ್ರತಿಭಟನಾಕಾರರು, ರಾಜಕೀಯಕ್ಕಾಗಿ ಓರ್ವ ಹೆಣ್ಣುಮಗಳನ್ನು ಇಟ್ಟುಕೊಂಡು ಡಿ.ಕೆ.ಶಿವಕುಮಾರ್, ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಷಡ್ಯಂತ್ರ ನಡೆಸಿದ್ದಾರೆ. ತಕ್ಷಣ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸರ್ಕಾರ ಡಿಕೆಶಿ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರಕ್ಕಾಗಿ ಇಂದು 3 ಗಂಟೆಯ ಸುಮಾರಿಗೆ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಭೇಟಿ ನೀಡುತ್ತಿದ್ದಾರೆ. ಈ ವೇಳೆಯೂ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸುವ ಸಾಧ್ಯತೆಯೂ ದಟ್ಟವಾಗಿದೆ.
https://www.facebook.com/105350550949710/videos/960051461468289/
Laxmi News 24×7