Breaking News

ಸಿಪಿಐ ವಿರುದ್ಧ ರೇಪ್ ಕೇಸ್…! ಜ್ಯೂಸ್ ನಲ್ಲಿ ಮತ್ತಿನ ಔಷಧ ನೀಡಿ ಅತ್ಯಾಚಾರ

Spread the love

ಶಿವಮೊಗ್ಗ : ಜಿಲ್ಲೆಯ ಸಾಗರ ಪೊಲೀಸ್ ಠಾಣೆಯ ಸಿಪಿಐ ಅಶೋಕ್ ಕುಮಾರ್ ಎಂಬುವವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ವ್ಯಕ್ತಿ ಕಳೆದ ನಾಲ್ಕು ವರ್ಷದಿಂದ ಮಹಿಳೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ.

ಸಂತ್ರಸ್ತೆ ಪ್ರಕರಣವೊಂದರ ಸಲುವಾಗಿ ದೂರು ಸಲ್ಲಿಸಲು ಠಾಣೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಸಿಪಿಐ ಅವರ ಮೊಬೈಲ್ ನಂಬರ್ ಪಡೆದಿದ್ದಾರೆ. ಆ ನಂತರ ಅವರ ಪರಿಚಯ ಮಾಡಿಕೊಂಡಿದ್ದಾರೆ. ನಂತರ ಸಲುಗೆ ಬೆಳೆಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ನನ್ನನ್ನು ಬೆದರಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಜ್ಯೂಸ್ ನಲ್ಲಿ ಮತ್ತು ಬರುವ ಔಷಧಿ ನೀಡಿ ಅತ್ಯಾಚಾರ ನಡೆಸಿದ್ದಾರೆ. ಅಶ್ಲೀಲ ಫೋಟೋ ಮತ್ತು ವೀಡಿಯೋಗಳನ್ನು ಮಾಡಿಕೊಂಡು ಬ್ಲಾಕ್ ಮೇಲ್ ಮಾಡಿದ್ದಾನೆ ಎಂದು ಸಂತ್ರಸ್ತೆ ದೂರು ಸಲ್ಲಿಸಿದ್ದಾರೆ.

ಅಷ್ಟೇ ಅಲ್ಲದೇ, ಪೊಲೀಸರಿಗೆ ದೂರು ನೀಡಿದ್ದಕ್ಕೆ ಕೊಲೆ ಬೆದರಿಕೆ ಹಾಗೂ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ರೇಪ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಕೂಡ ಸಂತ್ರಸ್ತೆ ಆರೋಪಿಸಿದ್ದಾರೆ. ಸದ್ಯ ಅಶೋಕ್ ಮೇಲೆ ಎಫ್ ಐಆರ್ ದಾಖಲಾಗಿದ್ದು, ಐಪಿಸಿ ಕಲಂ 354(ಎ), 376 (ಸಿ), 417, 504, 506ರ ಅಡಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ