Breaking News
Home / ರಾಜ್ಯ / ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ.:ಸಿದ್ದರಾಮಯ್ಯ ಟ್ವೀಟ್

ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ.:ಸಿದ್ದರಾಮಯ್ಯ ಟ್ವೀಟ್

Spread the love

ಬೆಂಗಳೂರು: ರಾಜ್ಯದ ರಾಜಕೀಯವನ್ನು ಕಳೆದ ಕೆಲ ದಿನಗಳಿಂದ ಆವರಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ಸಿಡಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾಳೆ, ತನ್ನ ವಕೀಲನ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ, ತಂದೆ-ತಾಯಿ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ? ಎಂದು ಪ್ರಶ್ನಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಈ ಪ್ರಹಸನ ಪೊಲೀಸರು ಮತ್ತು ರಾಜ್ಯ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.

ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ದಿನಕ್ಕೊಂದು ತಿರುವು ಪಡೆದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿರುವ ಸಿಡಿ ಹಗರಣದ ತನಿಖೆ ತಾರ್ಕಿಕ ಅಂತ್ಯ ಕಾಣಬೇಕಾದರೆ ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದ ಹೊರಬಂದು ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ನೀಡಬೇಕು. ಕಾನೂನುಬದ್ಧವಾದ ಅವಳ ಹಕ್ಕನ್ನು ಚಲಾಯಿಸದಂತೆ ತಡೆಯುತ್ತಿರುವವರು ಯಾರು?

ಸಿಡಿಯಲ್ಲಿರುವ ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ಸಿಡಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾಳೆ, ತನ್ನ ವಕೀಲನ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ, ತಂದೆ-ತಾಯಿ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ? 3/5

ಮಾಧ್ಯಮಗಳಲ್ಲಿ ಪ್ರಕಟ/ಪ್ರಸಾರವಾಗಿರುವ ಯುವತಿಯದ್ದೆನ್ನಲಾದ ಹೇಳಿಕೆಗಳನ್ನು ಗಮನಿಸಿದರೆ ಆಕೆಗೆ ರಾಜ್ಯ ಸರ್ಕಾರದ ಮೇಲಾಗಲಿ, ಪೊಲೀಸರ ಮೇಲಾಗಲಿ ನಂಬಿಕೆ ಇಲ್ಲ. ಪೊಲೀಸರು ತನ್ನ ವಿರುದ್ಧವೇ ಸಂಚು ಮಾಡುತ್ತಿದ್ದಾರೆಂಬ ಅರ್ಥದಲ್ಲಿ ಯುವತಿ ಮಾತನಾಡುತ್ತಿದ್ದಾಳೆ. ಗೃಹಸಚಿವ @BSBommai ಈ ಬಗ್ಗೆ ಗಮನಹರಿಸಬೇಕು.

ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ. ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲವೆಂದರೆ ಏನು ಅರ್ಥ? ಆಕೆಯೇನು ವಿಜಯಮಲ್ಯನೋ ಇಲ್ಲವೇ ನೀರವ್ ಮೋದಿಯೋ?

ಈ ಟ್ವೀಟ್​ಗಳ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿರುವುದು ಸ್ಪಷ್ಟವಾಗಿದೆ. ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು ಇಷ್ಟು ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಮುಂದಿನ ದಿನಗಳಲ್ಲಿ ಈ ಕುರಿತು ಹೋರಾಟ ನಡೆಸುವ ಸುಳಿವನ್ನು ಸಹ ನೀಡಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ