Breaking News

ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮ ವಿರೋಧಿಸಿ ಪ್ರತಿಭಟನೆ

Spread the love

ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಚಕ್ರವರ್ತಿ ಸೂಲಿಬೆಲೆ ವಿಶೇಷ ಉಪನ್ಯಾಸ ಕಾರ್ಯಕ್ರಮ ವಿರೋಧಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಗೋ ಬ್ಯಾಕ್ ಚಳವಳಿ ನಡೆಸಿದರು.

‘ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಚಕ್ರವರ್ತಿ ಸೂಲಿಬೆಲೆ ಅವರು ಹಲವು ಸುಳ್ಳುಗಳನ್ನು ಹೇಳಿ ಯುವ ಸಮೂಹ ಹಾಗೂ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಅವರ ಭಾಷಣಕ್ಕೆ ಅವಕಾಶ ನೀಡಬಾರದು’ ಎಂದು ಆಗ್ರಹಿಸಿದರು.

ನೆಹರೂ ಕ್ರೀಡಾಂಗಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದರು. ಮುಖಂಡರಾದ ಚೇತನ್ ಗೌಡ, ಬಾಲಾಜಿ, ಕಿರಣ್ ಇದ್ದರು.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ