ಬೆಂಗಳೂರು,ಮಾ.28- ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1ರಿಂದ 9ನೇ ತರಗತಿವರೆಗೆ ಕಳೆದ ಬಾರಿಯಂತೆ ಪರೀಕ್ಷೆಗಳನ್ನು ರದ್ದು ಮಾಡುವ ಬಗ್ಗೆ ನಾಳೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಈ ಮೂಲಕ ಕಳೆದ ಬಾರಿಯಂತೆ ಈ ಬಾರಿಯೂ 1ರಿಂದ 9ನೇ ತರಗತಿವರೆಗೆ ಪರೀಕ್ಷೆಗಳು ರದ್ದಾಗುವ ಸಾಧ್ಯತೆಯಿದೆ ಎಂಬ ಸುಳಿವನ್ನು ಅವರು ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ಕಳೆದ ಎರಡು ವಾರದಿಂದ ರಾಜ್ಯದಲ್ಲಿ ಮತ್ತೆ ನಿಧಾನವಾಗಿ ಏರುಗತಿಯತ್ತ ಸಾಗಿದೆ. ಇನ್ನು ಎರಡು ತಿಂಗಳ ಕಾಲ ಸೋಂಕಿನ ಪ್ರಮಾಣ ಹೆಚ್ಚಾಗುವ ಸಂಭವವಿದೆ ಎಂದು ತಜ್ಞರು ಸಲಹೆ ನೀಡಿರುವುದಾಗಿ ಹೇಳಿದರು
