ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ಬೆಂಗಳೂರು ನಗರದ ಪಬ್ ನಲ್ಲಿ 16 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ನಗರದ ನ್ಯೂ ಬಿಇಎಲ್ ರಸ್ತೆಯಲ್ಲಿನ ಪಬ್ 16 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಪಬ್ ನ 86 ಜನರಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. 86 ಸಿಬ್ಬಂದಿ ಪೈಕಿ 16 ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈ ಮೂಲಕ ಸಿಲಿಕಾನ್ ಸಿಟಿಯಲ್ಲಿ ಮತ್ತೆ ಕೊರೊನಾ ಅಬ್ಬರಿಸುತ್ತಿದೆ.
ರಾಜ್ಯದಲ್ಲಿ ನಿನ್ನೆ ಒಂದೇ ದಿನ 3,082 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. 14 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 2004 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಕೊರೊನಾ ಸೋಂಕಿತರ ಸಂಖ್ಯೆ 4,28,173 ಕ್ಕೆ ಏರಿಕೆಯಾಗಿದೆ.
Laxmi News 24×7