Breaking News

ಸಿಡಿ ಲೇಡಿಯಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಇ-ಮೇಲ್ ರವಾನೆ

Spread the love

ಬೆಂಗಳೂರು, ಮಾರ್ಚ್ 29: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಇ-ಮೇಲ್ ಕಳುಹಿಸಿದ್ದಾರೆ.

ತಮ್ಮ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಯಲಿ, ನನ್ನ ತಂದೆ ತಾಯಿಗೆ ರಕ್ಷಣೆ ಕೊಡಿ ಎಂದು ಇ-ಮೇಲ್‌ನಲ್ಲಿ ಮನವಿ ಮಾಡಿದ್ದಾರೆ. ಇಂದು ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ.

ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ, ನನ್ನ ಪೋಷಕರಿಗೆ ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ್ದಾರೆ. ಪ್ರಕರಣದಲ್ಲಿ ನನಗೆ ಮತ್ತು ನನ್ನ ಪೋಷಕರಿಗೆ ರಕ್ಷಣೆ ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇ-ಮೇಲ್ ಮೂಲಕ ನಿನ್ನೆಯೇ ಪತ್ರವನ್ನು ರವಾನೆ ಮಾಡಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ನಮ್ಮ ಪೋಷಕರಿಂದ ಒತ್ತಡ ಹಾಕಿ ನನ್ನನ್ನು ಕಿಡ್ನ್ಯಾಪ್ ಮಾಡಿಸಿರುವುದಾಗಿ ಹೇಳಿಕೆ ನೀಡಿಸಿದ್ದಾರೆ, ಡಿವೈಎಸ್‌ಪಿ ಕಟ್ಟಿಮನಿ ನಮ್ಮ ಕುಟುಂಬದ ಮೇಲೆ ಒತ್ತಡ ಹಾಕುತ್ತಿದ್ದಾರೆ, ಕಟ್ಟೀಮನಿ ರಮೇಶ್ ಜಾರಕಿಹೊಳಿ ಪರವಾಗಿ ಕೆಲಸ ಮಾಡುತ್ತಿದ್ದಾರೆ. ನ್ಯಾಯಾಲಯವು ನನ್ನ ಮನವಿಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕೇಳಿಕೊಂಡಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಯುವತಿ ಬರೆದ ಇ ಮೇಲ್‌ನಲ್ಲಿ ರಮೇಶ್ ಜಾರಕಿಹೊಳಿ ಜತೆ ಸೇರಿಕೊಂಡು ಎಸ್‌ಐಟಿ ಅಧಿಕಾರಿಗಳು ನನಗೂ ನಮ್ಮ ಕುಟುಂಬಕ್ಕೂ ಯಾವುದೇ ರಕ್ಷಣೆ ನೀಡಿಲ್ಲ.

ಎಸ್‌ಐಟಿ ಮೂಲಕ ನಮ್ಮ ಕುಟುಂಬಕ್ಕೆ ಬೆದರಿಕೆ ಹಾಕಿಸಿದ್ದಾರೆ. ರಮೇಶ್ ಜಾರಕಿಹೊಳಿ ತಮ್ಮ ಪ್ರಭಾವವನ್ನು ಬಳಸಿ ಸಾಕ್ಷ್ಯ ನಾಶ ಮಾಡಿದ್ದಾರೆ. ಅವರು ನನಗೆ ಬಹಿರಂಗವಾಗಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಯಾವುದೇ ಸ್ಥಳದಲ್ಲಿ ಬೇಕಾದರೂ ನಮ್ಮನ್ನು ಕೊಲ್ಲಬಹುದು.

ಎಸ್‌ಐಟಿ ರಮೇಶ್ ಜಾರಕಿಹೊಳಿ ಹೇಳಿದಂತೆ ಕಾರ್ಯ ನಿರ್ವಹಿಸುತ್ತದೆ. ಕರ್ನಾಟಕ ಸರ್ಕಾರವೂ ಕೂಡ ರಮೇಶ್ ಜಾರಕಿಹೊಳಿ ರಕ್ಷಣೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ