Breaking News

ಲಾಕ್​ಡೌನ್, ನೈಟ್ ಕರ್ಪ್ಯೂ ಬಗ್ಗೆ ಬೇಕಾಬಿಟ್ಟಿ ಯಾರೂ ಹೇಳಿಕೆ ಕೊಡುವಂತಿಲ್ಲ; B.S.Y.

Spread the love

ಬೆಂಗಳೂರು(ಮಾ.29): ಲಾಕ್ ಡೌನ್ , ನೈಟ್ ಕರ್ಪ್ಯೂ ಬಗ್ಗೆ ಬೇಕಾಬಿಟ್ಟಿ ಯಾರೂ ಹೇಳಿಕೆ ಕೊಡುವಂತಿಲ್ಲ ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಸಚಿವರು ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ಲಾಕ್‌ಡೌನ್, ಕರ್ಫ್ಯೂ , ಕಂಟೋನ್ಮೆಂಟ್ ವಲಯಗಳ ಬಗ್ಗೆ ಆಯಾ ಕಾಲಕ್ಕೆ ತಕ್ಕಂತೆ ಕೇಂದ್ರ ಗೃಹ ಸಚಿವಾಲಯ ಮಾತ್ರ ಆದೇಶ ಹೊರಡಿಸಲಿದೆ. ಕೇಂದ್ರದ ಮಾದರಿಯಲ್ಲೇ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಆದೇಶಗಳನ್ನು ಹೊರಡಿಸಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕೋವಿಡ್ ಸಂಬಂಧಿತ ಸೂಚನೆ ಮತ್ತು ನಿರ್ದೇಶನವನ್ನು ಮುಖ್ಯ ಕಾರ್ಯದರ್ಶಿಗಳ ಸಹಿಯಲ್ಲಿ ಮಾತ್ರ ಹೊರಡಿಸಬೇಕು.  ಸಿಎಂ ಅನುಮೋದನೆ ಪಡೆದ ಬಳಿಕವೇ ಹೊರಡಿಸಬೇಕು. ಯಾವುದೇ ಸಚಿವರು ಮತ್ತು ಅಧಿಕಾರಿಗಳು ಯಾವುದೇ ಪತ್ರಿಕಾ ಹೇಳಿಕೆ ನೀಡಬಾರದು. ಸಚಿವರು ಮತ್ತು ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಆದೇಶಿಸಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ