ಇಂದು ಚಿಕ್ಕೋಡಿ ನಗರದಲ್ಲಿರುವ ನೂತನ ಕೇಂದ್ರೀಯ ವಿದ್ಯಾಲಯಕ್ಕೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿ, ಮೂಲಸೌಕರ್ಯಗಳ ವ್ಯವಸ್ಥೆಯನ್ನು ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಬಳಿಕ ಕೊರೊನಾ ಸುರಕ್ಷತಾ ನಿಯಮವನ್ನು ಪಾಲಿಸಿ, ಈ ಶೈಕ್ಷಣಿಕ ವರ್ಷದಿಂದ ತರಗತಿಗಳನ್ನು ಪುನರಾರಂಭಿಸಲು ಸೂಚಿಸಿದರು. ನಂತರ ಏಪ್ರಿಲ್ ತಿಂಗಳ ಆರಂಭದಿಂದ ಆನ್ ಲೈನ್ ಮೂಲಕ ವಿದ್ಯಾರ್ಥಿಗಳಿಗೆ ದಾಖಲಾತಿ ಅರ್ಜಿ ಸಲ್ಲಿಸಲು ಅನುಮತಿ ನೀಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಚಿಕ್ಕೋಡಿ ತಾಲ್ಲೂಕು ಉಪವಿಭಾಗಾಧಿಕಾರಿಗಳಾದ ಶ್ರೀ ಯುಕೇಶ ಕುಮಾರ್, ಪ್ರಭಾರಿ ಪ್ರಾಂಶುಪಾಲರಾದ ಶ್ರೀ ಸುಧೀರ್ ಶರ್ಮಾ, ಸಹಾಯಕ ಕಾರ್ಯಕಾರಿ ಅಭಿಯಂತರರಾದ ಶ್ರೀ ಭರತ ಬೇಡಕಿಹಾಳೆ, ಕೇಂದ್ರೀಯ ಲೋಕೋಪಯೋಗಿ ಸಹಾಯಕ ಅಭಿಯಂತರರಾದ ಶ್ರೀ ರಶೀದ್, ಗುತ್ತಿಗೆದಾರ ಶ್ರೀ ಕೋಟೇಶ್ವರ ರಾವ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Laxmi News 24×7