Breaking News

ಐವತ್ತು ಹಳೆಯ ನಿಷ್ಠಾವಂತ ಕಾಂಗ್ರೆಸ್ ನಾಯಕರ ಸಭೆ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಅಭ್ಯರ್ಥಿಯಾದ ಬಳಿಕ ಪಕ್ಷದಲ್ಲಿ ಅಚರಿಯ ಬೆಳವಣಿಗೆಗಳು ನ

Spread the love

ಬೆಳಗಾವಿ- ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಅಭ್ಯರ್ಥಿಯಾದ ಬಳಿಕ ಪಕ್ಷದಲ್ಲಿ ಅಚರಿಯ ಬೆಳವಣಿಗೆಗಳು ನಡೆದಿವೆ.

ಗೋಕಾಕ್ ಕ್ಷೇತ್ರದ ಜೆಡಿಎಸ್ ನಾಯಕ ಅಶೋಕ ಪೂಜಾರಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತೇನೆ ಎಂದು ಘೋಷಣೆ ಮಾಡಿದ ಬೆನ್ನಲ್ಲಿಯೇ ಈಗ ರಮೇಶ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ರೆಡಿಯಾಗಿದ್ದು,ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಬೆಳಗಾವಿ ವಿಧಾನಸಭಾ ಮತಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿರುವ ರಮೇಶ್ ಲಕ್ಷ್ಮಣರಾವ್ ಕುಡಚಿ ಅವರು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು,ರಮೇಶ್ ಕುಡಚಿ ಅವರ ಸೇರ್ಪಡೆಯಿಂದ ಕಾಂಗ್ರೆಸ್ ಇನ್ನಷ್ಟು ಪ್ರಬಲವಾಗುತ್ತದೆ ಎನ್ನುವದು ಕಾಂಗ್ರೆಸ್ ಲೆಕ್ಕಾಚಾರ

ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪಚುನಾವಣೆಯ ಬೃಹತ್ ಪ್ರಚಾರ ಸಭೆಯಲ್ಲಿ ಅಶೋಕ ಪೂಜಾರಿ ಮತ್ತು ರಮೇಶ್ ಕುಡಚಿ ಇಬ್ಬರು ನಾಯಕರು ಕಾಂಗ್ರೆಸ್ ಸೇರುವದು ಖಚಿತ….

ಐವತ್ತು ಹಳೆಯ ನಿಷ್ಠಾವಂತ ಕಾಂಗ್ರೆಸ್ ನಾಯಕರ ಸಭೆ

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಆರ್ ವ್ಹಿ ದೇಶಪಾಂಡೆ ಅವರ ನೇತ್ರತ್ವದಲ್ಲಿ ಇವತ್ತು ಬೆಳಿಗ್ಗೆ 11-00 ಗಂಟೆಗೆ ಕಾಂಗ್ರೆಸ್ ಭವನದಲ್ಲಿ ನಿಷ್ಠಾವಂತ ಕಾಂಗ್ರೆಸ್ ನಾಯಕರ ಸಭೆ ನಡೆಯಲಿದೆ. ಕಾಂಗ್ರೆಸ್ ಪಕ್ಷದಿಂದ ದೂರ ಉಳಿದಿರುವ,ಅಥವಾ ಕಡೆಗೆಣಿಸಲ್ಪಟ್ಡಿರುವ ನಾಯಕರನ್ನು ಸಭೆಗೆ ಅಹ್ವಾನಿಸಲಾಗಿದೆ


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ