Breaking News

ಸಿಡಿ ಪ್ರಕರಣ; ಯುವತಿಗೆ ಕಬ್ಬನ್ ಪಾರ್ಕ್ ಪೊಲೀಸರ ನೋಟಿಸ್

Spread the love

ಬೆಂಗಳೂರು, ಮಾರ್ಚ್ 29; ಮಾಜಿ ಸಚಿವ, ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತ ಯುವತಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಮಾರ್ಚ್ 30ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ.

ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಯುವತಿ ಪರ ವಕೀಲ ಜಗದೀಶ್ ಮೂಲಕ ಸಂತ್ರಸ್ತ ಯುವತಿಗೆ ನೋಟಿಸ್ ನೀಡಿದ್ದಾರೆ. ಸೋಮವಾರ ಕಬ್ಬನ್ ಪಾರ್ಕ್ ಪೊಲೀಸರು ರಮೇಶ್ ಜಾರಕಿಹೊಳಿ ವಿಚಾರಣೆಯನ್ನು ನಡೆಸಿದ್ದರು. ಏಪ್ರಿಲ್ 2ರಂದು ಪುನಃ ವಿಚಾರಣೆಗೆ ಆಗಮಿಸಬೇಕು ಎಂದು ಸೂಚನೆಯನ್ನು ನೀಡಿದ್ದಾರೆ.

 

ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಪೊಲೀಸರು ಯುವತಿಗೆ ನೋಟಿಸ್ ನೀಡಿದ್ದಾರೆ. ನಿಮ್ಮ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಬೇಕು, ಸ್ಥಳದ ಪಂಚನಾಮೆ ನಡೆಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

 

ಕಬ್ಬನ್ ಪಾರ್ಕ್‌ ಪೊಲೀಸರು ಸಿಡಿ ಪ್ರಕರಣದ ಸಂತ್ರಸ್ತ ಯುವತಿ ನೀಡಿದ ದೂರಿನ ಅನ್ವಯ ರಮೇಶ್ ಜಾರಕಿಹೊಳಿ ವಿಚಾರಣೆಯನ್ನು ನಡೆಸಿದರು. ಸುಮಾರು ನಾಲ್ಕೂವರೆ ತಾಸು ವಿಚಾರಣೆ ನಡೆಸಿದಾಗ ಹಲವು ಪ್ರಶ್ನೆಗಳಿಗೆ ಅವರು ಉತ್ತರ ನೀಡಿದರು.

 

ಕೆಲವು ಪ್ರಶ್ನೆಗಳಿಗೆ ಉತ್ತರ ನೀಡಲು ವಕೀಲರ ಜೊತೆ ಚರ್ಚಿಸುತ್ತೇನೆ. 4 ದಿನದ ಕಾಲಾವಕಾಶ ನೀಡಿ ಎಂದು ಪೊಲೀಸರಿಗೆ ಮನವಿ ಮಾಡಿದರು. ಏಪ್ರಿಲ್ 2ರಂದು ಮತ್ತೆ ವಿಚಾರಣೆಗೆ ಬರಲು ಪೊಲೀಸರು ಸೂಚನೆ ನೀಡಿದ್ದಾರೆ.

ಸಿಡಿ ಪ್ರಕರಣದ ಸಂತ್ರಸ್ತ ಯುವತಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಆಕೆಯ ಪರ ವಕೀಲ ಜಗದೀಶ್ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ನ್ಯಾಯಾಲಯ ಒಪ್ಪಿಗೆ ನೀಡಿದೆ. ಯಾವಾಗ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ? ಎಂಬುದು ಇನ್ನು ತಿಳಿದುಬಂದಿಲ್ಲ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ