Breaking News

ಇನ್ನೊಂದು ಗಂಟೆಯಲ್ಲಿ ಯುವತಿ ಹಾಜರು :ವಕೀಲ ಜಗದೀಶ್

Spread the love

ಬೆಂಗಳೂರು:‌ ಯುವತಿ ಹಾಜರುಪಡಿಸುವ ವಿಚಾರದಲ್ಲಿ ನ್ಯಾಯಾಲಯದ ಕಾನೂನು ಪ್ರಕ್ರಿಯೆ ಮುಗಿದ ಬಳಿಕ ಯುವತಿ ಹಾಜರು ಪಡಿಸಲಾಗುವುದು ಎಂದು ಯುವತಿ ಪರ ವಕೀಲ ಕೆ‌.ಎನ್.ಜಗದೀಶ್ ತಿಳಿಸಿದ್ದಾರೆ‌. ತಮ್ಮ ನಿವಾಸದ ಎದುರು ಮಾಧ್ಯಮಗಳೊಂದಿಗೆ ಮಾತನಾಡಿದ ಜಗದೀಶ್,

ಸಂತ್ರಸ್ತ ಯುವತಿ ಕೋರ್ಟ್ ಮುಂದೆ ಹಾಜರಾಗಿ ಸಿಆರ್​​​ಪಿಸಿ 164 ರಡಿ ಹೇಳಿಕೆ ದಾಖಲಿಸಿಕೊಳ್ಳಲು ನ್ಯಾಯಾಲಯ ಈಗಾಗಲೇ ಅನುಮತಿ ನೀಡಿದೆ‌. ಆದರೆ, ಎಲ್ಲಿ ಮತ್ತು ಯಾವ ಸಮಯದಲ್ಲಿ ಹಾಜರುಪಡಿಸಬೇಕು ಎಂದು ಸ್ಪಷ್ಟವಾಗಿ ತಿಳಿಸಿರಲಿಲ್ಲ. ಹೀಗಾಗಿ ಕೋರ್ಟ್​ಗೆ ತೆರಳುವುದಾಗಿ ತಿಳಿಸಿದ್ದಾರೆ.

ಯುವತಿ ಹಾಜರುಪಡಿಸುವ ಸಂಬಂಧ ನ್ಯಾಯಾಲಯದಲ್ಲಿ ಈ ಬಗ್ಗೆ ಚರ್ಚಿಸಿದ ಬಳಿಕ ನ್ಯಾಯಾಧೀಶರಿಂದ ಅನುಮತಿ ಪಡೆಯಲಾಗುವುದು. ಯುವತಿ ಹಾಜರುಪಡಿಸಿ ಎಸ್‌ಐಟಿ ತನಿಖಾಧಿಕಾರಿಗಳಿಗೂ ಈ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ