Breaking News

ಎಲ್ಲರ ಕಣ್ತಪ್ಪಿಸಿ ನ್ಯಾಯಾಧೀಶರ ಮುಂದೆ ಹಾಜರಾದ ಸಿಡಿ ಯುವತಿ

Spread the love

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಮಹತ್ವದ ಘಟ್ಟ ತಲುಪಿದ್ದು, ಸಂತ್ರಸ್ತ ಯುವತಿ 24ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾಳೆ.

ಬಿಗಿ ಪೊಲೀಸ್ ಭದ್ರತೆಯಲ್ಲಿ ಮಾಧ್ಯಮಗಳು, ನೆರೆದಿದ್ದ ಜನರ ಕಣ್ತಪ್ಪಿಸಿ ಯುವತಿ ಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಹಾಜರಾಗಿದ್ದು, ತನ್ನ ಹೇಳಿಕೆ ದಾಖಲಿಸುತ್ತಿದ್ದಾಳೆ.

ಈ ಕುರಿತು ಸಿಡಿ ಯುವತಿ ಪರ ವಕೀಲ ಜಗದೀಶ್ ಮಾಹಿತಿ ನೀಡಿದ್ದು, ಸಂತ್ರಸ್ತ ಯುವತಿ ಈಗಾಗಲೇ ಕೋರ್ಟ್ ಹಾಲ್ ನಲ್ಲಿದ್ದು, ನ್ಯಾಯಾಧೀಶರ ಮುಂದೆ ಹೇಳಿಕೆ ನೀಡುತ್ತಿದ್ದಾಳೆ. ಯುವತಿಯ ಭದ್ರತೆ ದೃಷ್ಟಿಯಿಂದ ಮಾಧ್ಯಮಗಳ ಕಣ್ತಪ್ಪಿಸಿ ಕೋರ್ಟ್ ಮುಂದೆ ಹಾಜರುಪಡಿಸಿದ್ದೇವೆ ಎಂದು ಹೇಳಿದ್ದಾರೆ.

ಯುವತಿ ಮಾನಸಿಕವಾಗಿ ಸದೃಢವಾಗಿದ್ದಾಳೆ, ದೈಹಿಕವಾಗಿ ಸ್ವಲ್ಪ ಸುಸ್ತಿನಲ್ಲಿದ್ದು, ಧೈರ್ಯದಿಂದ ಇದ್ದಾರೆ. ತನಗಾದ ಅನ್ಯಾಯದ ಬಗ್ಗೆ ನ್ಯಾಯಾಧೀಶರ ಮುಂದೆ ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ ಎಂದು ತಿಳಿಸಿದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ