ಕಲಬುರಗಿ: ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರುವುದು ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳ ಹುನ್ನಾರವಾಗಿದೆ. ಅಭ್ಯರ್ಥಿ ವಿಷಯದಲ್ಲಿ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಪ್ರಕರಣದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಅಂತಾ ಹೇಳಿದ್ದೆ. ಅದು ಇದೀಗ ನಡೆಯುತ್ತಿದೆ. ಎಸ್‌ಐಟಿ ಯಿಂದ ಸತ್ಯ ಹೊರಬರಲ್ಲ ಅಂತಲೂ ಹೇಳಿದ್ದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಉಸ್ತುವಾರಿಯಲ್ಲಿ ತನಿಖೆಗೆ ಆಗ್ರಹಿಸಲಾಗಿತ್ತು. ಈಗ ಯುವತಿ ಕೂಡ ಇದರ ಕುರಿತು ಪತ್ರ ಬರೆದಿದ್ದಾರೆ. ಮುಂದೆ ಏನಾಗುತ್ತೋ ನೋಡೋಣ ಎಂದರು.
ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕಾರಿನ ಮೇಲೆ ಕಲ್ಲೆಸೆತ ಪ್ರಕರಣ ಕುರಿತ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ಕಾನೂನು ಕೈಗೆ ತಗೆದುಕೊಳ್ಳಲು ಬರೋದಿಲ್ಲ. ಅದು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪದ ಬಗ್ಗೆ ಈಗಾಗಲೇ ಅವರೇ ಅಲ್ಲಗಳೆದಿದ್ದಾರೆ ಎಂದರು.
Laxmi News 24×7