Breaking News
Home / ಜಿಲ್ಲೆ / ಬೆಂಗಳೂರು / ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ, ಯಾವ ನಗರದಲ್ಲಿ ಎಷ್ಟು?

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ, ಯಾವ ನಗರದಲ್ಲಿ ಎಷ್ಟು?

Spread the love

ನವದೆಹಲಿ, ಮಾರ್ಚ್ 30: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮಂಗಳವಾರ (ಮಾರ್ಚ್ 30)ದಂದು ಬದಲಾವಣೆಯಾಗಿದೆ. ದೇಶದೆಲ್ಲೆಡೆ ಪೆಟ್ರೋಲ್ ಬೆಲೆ 19 ರಿಂದ 22 ಪೈಸೆ ಪ್ರತಿ ಲೀಟರ್ ಹಾಗೂ ಡೀಸೆಲ್ ಬೆಲೆ 21 ರಿಂದ 23 ಪೈಸೆ ಪ್ರತಿ ಲೀಟರ್ ಇಳಿಕೆಯಾಗಿದೆ.

ಫೆಬ್ರವರಿ 27ರ ಬಳಿಕ ಮತ್ತೆ ಇಂಧನ ದರ ಪರಿಷ್ಕರಣೆಗೊಂಡಿರಲಿಲ್ಲ. ನಂತರ ಸತತ ಎರಡು ದಿನ ಸರ್ಕಾರಿ ಸ್ವಾಮ್ಯದ ಮೂರು ತೈಲ ಕಂಪನಿಗಳು ಬೆಲೆ ಇಳಿಕೆ ಮಾಡಿ, ಪರಿಷ್ಕೃತ ದರ ಪ್ರಕಟಿಸಿದ್ದವು. ಆಮೇಲೆ ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆಯಾಗಿರಲಿಲ್ಲ.

ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಮೂರು ವಾರಗಳ ಕಾಲ ತೈಲ ಬೆಲೆ ಏರಿಕೆಯನ್ನು ತಡೆ ಹಿಡಿಯಲಾಗಿತ್ತು. ಕಚ್ಚಾತೈಲ ಬೆಲೆ ಏರುಪೇರಾದರೂ ತೈಲ ಕಂಪನಿಗಳು ಇಂಧನ ಬೆಲೆ ಪರಿಷ್ಕರಿಸಿರಲಿಲ್ಲ. ಈಗ ಮಾರ್ಚ್ 27ರಿಂದ ಕೆಲ ರಾಜ್ಯಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮೇ 2ರಂದು ಫಲಿತಾಂಶ ಹೊರಬರಲಿದೆ.

ಒಟ್ಟಾರೆ, ಈ ವರ್ಷದಲ್ಲಿ ಇಂಧನ ದರ 26 ಬಾರಿ ಪರಿಷ್ಕರಣೆಗೊಂಡಿದ್ದು, ಪೆಟ್ರೋಲ್ ಒಟ್ಟು 7.46 ಪ್ರತಿ ಲೀಟರ್ ಹಾಗೂ ಡೀಸೆಲ್ 7.60 ಪ್ರತಿ ಲೀಟರ್ ನಷ್ಟು ಏರಿಕೆಯಾಗಿತ್ತು.

ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ 22 ಪೈಸೆ ಇಳಿಕೆಯಾಗಿ 90.56 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ 23 ಪೈಸೆ ಇಳಿಕೆಯಾಗಿ 80.87 ರೂಪಾಯಿ ಆಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 65.13 ಯುಎಸ್ ಡಾಲರ್ ಪ್ರತಿ ಬ್ಯಾರೆಲ್‌ನಷ್ಟಿದೆ. ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

ಪ್ರಮುಖ ನಗರಗಳಲ್ಲಿ ಮಾರ್ಚ್ 30ರ ಇಂಧನ ದರ

ನಗರ ಪೆಟ್ರೋಲ್ ಡೀಸೆಲ್
ದೆಹಲಿ 90.56 ರೂ 80.87 ರೂ
ಮುಂಬೈ 96.98 ರೂ 87.96 ರೂ
ಚೆನ್ನೈ: 92.58 ರೂ 85.88 ರೂ
ಬೆಂಗಳೂರು 93.59 ರೂ 85.75 ರೂ
ಕೋಲ್ಕತ್ತಾ 90.77 ರೂ 83.75 ರೂ
ನೋಯ್ಡಾ 88.91 ರೂ 81.33 ರೂ
ಪಾಟ್ನ 92.89 ರೂ 86.12 ರೂ
ಹೈದರಾಬಾದ್ 94.16 ರೂ 88.20 ರೂ
ಲಕ್ನೋ 88.85 ರೂ 81.27 ರೂ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ