Breaking News

‘ಸಿಡಿ ಯುವತಿ’ ‘ಎಸ್‌ಐಟಿ’ ವಶಕ್ಕೆ.?

Spread the love

ಬೆಂಗಳೂರು : 28 ದಿನಗಳ ಬಳಿಕ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದಂತ ರಾಸಲೀಲೆ ವೀಡಿಯೋದಲ್ಲಿನ ಲೇಡಿ, ಇಂದು ನ್ಯಾಯಾಧೀಶರ ಮುಂದೆ ತನ್ನ ಹೇಳಿಕೆ ದಾಖಲಿಸಲು ಗೌಪ್ಯ ಸ್ಥಳದಲ್ಲಿ ಹಾಜರ್ ಆಗಿದ್ದಾರೆ. ಇಂತಹ ಸಿಡಿ ಯುವತಿಯ ಹೇಳಿಕೆ ಪಡೆದ ನಂತ್ರ, ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರಲ್ಲಿ ಮನವಿ ಮಾಡಿದ್ದಾರೆ.

ನ್ಯಾಯಾಧೀಶರ ಮುಂದೆ ಹಾಜರಾಗಿ, ಸಿಡಿ ಸಂತ್ರಸ್ತ ಯುವತಿ ಗೌಪ್ಯ ಸ್ಥಳದಲ್ಲಿ ತನ್ನ ಹೇಳಿಕೆಯನ್ನು ದಾಖಲಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಈಗಾಗಲೇ ಅನೇಕ ಬಾರಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದರೂ, ಕಬ್ಬನ್ ಪಾರ್ಕ್ ಠಾಣೆಗೆ ಸಿಡಿ ಲೇಡಿ ಹಾಜರಾಗಿಲ್ಲ. ಮತ್ತೊಂದೆಡೆ ಎಸ್‌ಐಟಿ ತಂಡ ಸಿಡಿ ಪ್ರಕರಣದ ತನಿಖೆ ನಡೆಸುತ್ತಿದೆ.

ಇದರ ನಡುವೆ ಇಂದು ಸಿಆರ್ ಪಿಸಿ 164 ಅಡಿಯಲ್ಲಿ ಸಿಡಿ ಲೇಡಿ ಗೌಪ್ಯ ಸ್ಥಳದಲ್ಲಿ ನ್ಯಾಯಾಧೀಶರ ಮುಂದೆ ತನ್ನ ಹೇಳಿಕೆಯನ್ನು ನೀಡುತ್ತಿದ್ದಾರೆ. ನ್ಯಾಯಾಧೀಶರ ಮುಂದೆ ಹೇಳಿಕೆ ಪಡೆದ ನಂತ್ರ, ವಿಚಾರಣೆಗಾಗಿ ತಮ್ಮ ವಶಕ್ಕೆ ಸಿಡಿ ಲೇಡಿ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಸಿಡಿ ಲೇಡಿ ಎಸ್ ಐಟಿ ವಶಕ್ಕೆ ನ್ಯಾಯಾಲಯ ನೀಡುತ್ತಾ ಎನ್ನುವುದು ಈಗ ಕುತೂಹಲ ಮೂಡಿಸಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ