Breaking News

ಶಸ್ತ್ರಚಿಕಿತ್ಸೆಗೆ ಬಂದಿದ್ದ ಮಹಿಳೆ ಮೇಲೆ ಹಲ್ಲೆ ಮಾಡಿದ ಮಂಗಳೂರು ವೆನ್ಲಾಕ್ ಆಸ್ಪತ್ರೆ ವೈದ್ಯ

Spread the love

ಮಂಗಳೂರು, ಮಾರ್ಚ್ 31: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗೆಂದು ದಾಖಲಾದ ಮಹಿಳೆ ಮೇಲೆ ವೈದ್ಯರೊಬ್ಬರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ದ.ಕ ಜಿಲ್ಲೆಯ ಯೆಯ್ಯಾಡಿಯ ವಸಂತಿ ಎಂಬವರನ್ನು ಅಪೆಂಡಿಕ್ಸ್ ಆಗಿರುವ ಕಾರಣಕ್ಕೆ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಅನಂತರ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ ಬಳಿಕ ಊಟ ಮಾಡಲು ಸಾಧ್ಯವಾಗುತ್ತಿರಲಿಲ್ಲ.

ಇದರಿಂದಾಗಿ ಮಹಿಳೆಯ ಮಕ್ಕಳು ಮಂಗಳವಾರ ಮತ್ತೆ ವೆನ್ಲಾಕ್ ಆಸ್ಪತ್ರೆಗೆ ಕರೆ ತಂದು, ವೈದ್ಯರಲ್ಲಿ ತಪಾಸಣೆಗೆ ತೋರಿಸಿದ್ದಾರೆ. ಈ ಸಂದರ್ಭ ಶಸ್ತ್ರಚಿಕಿತ್ಸೆ ಮಾಡಿದ್ದ ವೈದ್ಯರು ಇರಲಿಲ್ಲ. ಡ್ಯೂಟಿ ಡಾಕ್ಟರೊಬ್ಬರು ಊಟ ಮಾಡಲು ಕಷ್ಟವಾಗುವುದಾದರೆ ಟ್ಯೂಬ್‌ ಮೂಲಕ ಜ್ಯೂಸ್ ನೀಡಿ ಎಂದು ಹೇಳಿ ಬಾಯಿಗೆ ಟ್ಯೂಬ್‌ ಹಾಕಿದ್ದಾರೆ.

ಇದಕ್ಕೆ ವಸಂತಿ ಅವರು ಆಕ್ಷೇಪ ವ್ಯಕ್ತಪಡಿಸಿದಾಗ, ಸಿಟ್ಟಿಗೆದ್ದ ವೈದ್ಯರು ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆಂದು ತಿಳಿದು ಬಂದಿದೆ. ಬಳಿಕ ವೈದ್ಯರು ಮಹಿಳೆಯ ಬಳಿ ಕ್ಷಮೆ ಕೇಳಿದ ಕಾರಣ, ಪೊಲೀಸರಿಗೆ ದೂರು ನೀಡಿಲ್ಲ ಎನ್ನಲಾಗಿದೆ.


Spread the love

About Laxminews 24x7

Check Also

ಗಣಪತಿ ಹಬ್ಬದ ಆಗಮನ — ಗ್ರಾಮೀಣ ಭಾಗದಲ್ಲಿ ಭಕ್ತಿ, ಸಂಭ್ರಮ, ಸಾಂಸ್ಕೃತಿಕ ಚೈತನ್ಯ ಸಾವಳಗಿ

Spread the love ಗಣಪತಿ ಹಬ್ಬದ ಆಗಮನ — ಗ್ರಾಮೀಣ ಭಾಗದಲ್ಲಿ ಭಕ್ತಿ, ಸಂಭ್ರಮ, ಸಾಂಸ್ಕೃತಿಕ ಚೈತನ್ಯ ಸಾವಳಗಿ ರಾಜ್ಯದಾದ್ಯಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ