Breaking News

HDK ವಿರುದ್ಧ ಹೊಸ ಬಾಂಬ್ ಸಿಡಿಸಿದ ಜಮೀರ್ ಅಹ್ಮದ್

Spread the love

ರಾಜ್ಯದಲ್ಲಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಗೆಲುವಿಗಾಗಿ ನಾನಾ ತಂತ್ರ ಹೆಣೆಯುತ್ತಿದೆ. ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡಾ ಕಾಂಗ್ರೆಸ್ ಗೆಲುವಿಗೆ ತೀವ್ರ ಪ್ರಯತ್ನ ನಡೆಸಿದ್ದು, ಇವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ.

ಇದರ ಮಧ್ಯೆ ಉಪ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಹೇಳಿದ್ದ ಜಾತ್ಯತೀತ ಜನತಾದಳ ಬಸವಕಲ್ಯಾಣದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಅಚ್ಚರಿ ಮೂಡಿಸಿದೆ. ಇದೀಗ ಬೆಂಗಳೂರಿನ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ.

ಬೀದರ್ ನಲ್ಲಿ ಮಾತನಾಡಿದ ಜಮೀರ್ ಅಹಮದ್, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿ ಏಜೆಂಟ್ ಎಂದರಲ್ಲದೆ ಬಿಜೆಪಿ ಬಳಿ 10 ಕೋಟಿ ರೂಪಾಯಿ ಪಡೆದು ಜೆಡಿಎಸ್ ಅಭ್ಯರ್ಥಿಯನ್ನು ಬಸವಕಲ್ಯಾಣದಲ್ಲಿ ಕಣಕ್ಕಿಳಿಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ