Breaking News

ಸಿ.ಡಿ. ಪ್ರಕರಣ: ಇಂದು ಯುವತಿ ವಿಚಾರಣೆ: ವೈದ್ಯಕೀಯ ಪರೀಕ್ಷೆ ನಡೆಸಿ,‌ ಮಹಜರು

Spread the love

ಬೆಂಗಳೂರು: ಸಿ.ಡಿ. ಪ್ರಕರಣ ಸಂಬಂಧ ನ್ಯಾಯಾಧೀಶರ ಎದುರು ಹೇಳಿಕೆ ನೀಡಿರುವ ಯುವತಿ, ಇಂದು ವಿಶೇಷ ತನಿಖಾ ತಂಡದ (ಎಸ್‌ಐಟಿ) ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ನ್ಯಾಯಾಲಯಕ್ಕೆ ಮಂಗಳವಾರ ಮಧ್ಯಾಹ್ನ ಹಾಜರಾದ ನಂತರ ಯುವತಿಯ ಧ್ವನಿ ಮಾದರಿ‌ ಸಂಗ್ರಹಿಸಲಾಗಿತ್ತು. ಜೊತೆಗೆ, ಬುಧವಾರ ಬೆಳಿಗ್ಗೆ ವಿಚಾರಣೆಗೆ ಬರುವಂತೆ ಎಸ್‌ಐಟಿ, ನೋಟಿಸ್ ಸಹ ನೀಡಿತ್ತು. ಅದರನ್ವಯ, ಯುವತಿ ವಿಚಾರಣೆಗೆ ಬರಲಿದ್ದಾರೆ. ತಮ್ಮ ಹೇಳಿಕೆಯನ್ನು ತನಿಖಾಧಿಕಾರಿ ಎದುರು ದಾಖಲಿಸಲಿದ್ದಾರೆ. ಇದಾದ ನಂತರ, ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ನಂತರ, ಯುವತಿ ಸಮೇತ ಅಧಿಕಾರಿಗಳು ಸ್ಥಳ‌ ಮಹಜರು ಮಾಡಲಿದ್ದಾರೆ.

ವಿಚಾರಣೆಗಾಗಿ ಆಡುಗೋಡಿಯಲ್ಲಿರುವ ಸಿಸಿಬಿ ತಾಂತ್ರಿಕ‌ ವಿಭಾಗದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಂಟಿ ಕಮಿಷನರ್ ಸಂದೀಪ್ ಪಾಟೀಲ, ಎಸಿಪಿ ಎಂ.ಸಿ. ಕವಿತಾ ಹಾಗೂ ಇತರರು ಹಾಜರಿರಲಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ