ಬೆಂಗಳೂರು, ಮಾರ್ಚ್ 30: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕರ್ನಾಟಕದಲ್ಲಿ ದಿನೇದಿನೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 2975 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ರಾಜ್ಯದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 992779ಕ್ಕೆ ಏರಿಕೆಯಾಗಿದೆ. ಒಂದೇ ದಿನ ಮಹಾಮಾರಿಗೆ 21 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 12541ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ 25541 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 1262 ಸೋಂಕಿತರು ಗುಣಮುಖರಾಗಿದ್ದು, ರಾಜ್ಯದಲ್ಲಿ ಈವರೆಗೂ 954678 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?:
ರಾಜ್ಯದಲ್ಲಿ ಒಟ್ಟು 2975 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 4, ಬಳ್ಳಾರಿ 48, ಬೆಳಗಾವಿ 19, ಬೆಂಗಳೂರು ಗ್ರಾಮಾಂತರ 66, ಬೆಂಗಳೂರು 1984, ಬೀದರ್ 102, ಚಾಮರಾಜನಗರ 3, ಚಿಕ್ಕಬಳ್ಳಾಪುರ 12, ಚಿಕ್ಕಮಗಳೂರು 14, ಚಿತ್ರದುರ್ಗ 19, ದಕ್ಷಿಣ ಕನ್ನಡ 47, ದಾವಣಗೆರೆ 9, ಧಾರವಾಡ 24, ಗದಗ 14, ಹಾಸನ 57, ಹಾವೇರಿ 0, ಕಲಬುರಗಿ 156, ಕೊಡಗು 1, ಕೋಲಾರ 21, ಕೊಪ್ಪಳ 15, ಮಂಡ್ಯ 34, ಮೈಸೂರು 111, ರಾಯಚೂರು 12, ರಾಮನಗರ 13, ಶಿವಮೊಗ್ಗ 32, ತುಮಕೂರು 43, ಉಡುಪಿ 53, ಉತ್ತರ ಕನ್ನಡ 40, ವಿಜಯಪುರ 15, ಯಾದಗಿರಿ 7 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.