Breaking News

22 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ

Spread the love

ಬೆಂಗಳೂರು: ರಾಜ್ಯ ಆಡಳಿತ ಯಂತ್ರದಲ್ಲಿ ಬಹುದೊಡ್ಡ ಬದಲಾವಣೆಯಾಗಿದ್ದು, ಒಟ್ಟು 22 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಬಿಬಿಎಂಪಿ ನೂತನ ಆಯುಕ್ತರಾಗಿ ಗೌರವ್ ಗುಪ್ತಾ ಅವರನ್ನು ನೇಮಕ ಮಾಡಲಾಗಿದೆ.ಅದೇ ರೀತಿ ಬಿಬಿಎಂಪಿ ಆಡಳಿತ ಅಧಿಕಾರಿಯಾಗಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಲಾಗಿದ್ದು, ಮಂಜುನಾಥ ಪ್ರಸಾದ್ ಅವರನ್ನು ಕಂದಾಯ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಇನ್ನು ನೂತನ ಆಯುಕ್ತ ಗೌರವ್ ಗುಪ್ತಾ ಅವರಿಗೆ ಹೆಚ್ಚುವರಿಯಾಗಿ ಕಂದಾಯ ಇಲಾಖೆ, ವಿಪತ್ತು ನಿರ್ವಹಣಾ ಇಲಾಖೆ ಹೊಣೆ ನೀಡಲಾಗಿದೆ.

ಉಳಿದಂತೆ ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿಗೆ ಬಿಬಿಎಂಪಿ ಆಡಳಿತ ಅಧಿಕಾರಿಯಾಗಿ ಹೆಚ್ಚುವರಿ ಹೊಣೆಯನ್ನು ನೀಡಲಾಗಿದ್ದು, ವಂದಿತಾ ಶರ್ಮ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜೀವ್ ಶರ್ಮ ಆಡಳಿತ ಸುಧಾರಣೆ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಬಿಬಿಎಂಪಿ ಆಡಳಿತಾಧಿಕಾರಿಯಾಗಿ ರಾಕೇಶ್ ಸಿಂಗ್, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಜಿ. ಕುಮಾರ್ ನಾಯಕ್ ಅವರನ್ನು ನೇಮಕ ಮಾಡಿದ್ದು, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ.

ಮೂಲಸೌಕರ್ಯ ಅಭಿವೃದ್ಧಿ ನಿಗಮದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಪಿಲ್ ಮೋಹನ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ಅವರನ್ನು ವರ್ಗಾವಣೆ ಮಾಡಲಾಗಿದೆ.ಪಂಕಜ್ ಕುಮಾರ್ ಪಾಂಡೆ ಎಂಎಸ್‌ಎಂಇ ಕಾರ್ಯದರ್ಶಿಯಾಗಿ, ವಿ. ಪೊನ್ನುರಾಜ್ ಡಿಪಿಎಆರ್ ಕಾರ್ಯದರ್ಶಿ, ಸಿಂಧೂ ರೂಪೇಶ್ ಪ್ರವಾಸೋದ್ಯಮ ಇಲಾಖೆಗೆ ವರ್ಗಾವಣೆಯಾಗಿದ್ದಾರೆ ಎನ್ನಲಾಗಿದ್ದು, ಈ ಕುರಿತಾದ ಹೆಚ್ಚಿನ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ ಎಂದು ವರದಿ ತಿಳಿಸಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ