Breaking News

ಹೋಟೆಲ್‌ ಉದ್ಯಮದಲ್ಲಿ ನಷ್ಟ ; ಆತ್ಮಹತ್ಯೆಗೆ ಶರಣಾದ ಮಾಲೀಕ

Spread the love

ವಿಜಯಪುರ: ಹೋಟೆಲ್‌ ಉದ್ಯಮದಲ್ಲಿ ನಷ್ಟ ಅನುಭವಿಸಿದ ಕಾರಣಕ್ಕೆ ಹೋಟೆಲ್ ಮಾಲೀಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತರನ್ನು ಗಣೇಶ್‌ (೪೦) ಎಂದು ಗುರುತಿಸಲಾಗಿದ್ದು ಮಂಗಳೂರು ಮೂಲದವರಾಗಿರುವ ಇವರು ಇಂಡಿಯಲ್ಲಿ ಹೋಟೆಲ್ ನಡೆಸುತ್ತಿದ್ದರು. 30 ಲಕ್ಷಕ್ಕೂ ಅಧಿಕ ಸಾಲ ಹೊಂದಿದ್ದ ಇವರು ಬಾಡಿಗೆ ಕಟ್ಟಡದಲ್ಲಿ ಹೋಟೆಲ್ ಮತ್ತು ಲಾಡ್ಜಿಂಗ್ ಆರಂಭಿಸಿದ್ದರು. ಕೋವಿಡ್ ಕಾರಣದಿಂದ ಹೋಟೆಲ್ ಉದ್ಯಮದ ಮೇಲೆ ಭಾರೀ ಹೊಡೆತ ಬಿದ್ದಿದ್ದರಿಂದ ಗಣೇಶ್ ಆರ್ಥಿಕ ಸಂಕಷ್ಟದಲ್ಲಿದ್ದರು ಎನ್ನಲಾಗಿದೆ.

ಹೋಟೆಲ್ ನಡೆಸಲು ಪಡೆದ ಸಾಲ ಹಿಂದಿರುಗಿಸಲಾಗದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಇಂಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲೀಸರು ತನಿಖೆ ನಡೆಸುತಿದ್ದಾರೆ.


Spread the love

About Laxminews 24x7

Check Also

ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ: ಸಿಜೆಐ

Spread the loveನವದೆಹಲಿ: ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ. ಅವರಲ್ಲಿ ಸೋಷಿಯಲ್‌ ಮೀಡಿಯಾ ಬಳಕೆದಾರರು, ಆರ್‌ಟಿಐ ಕಾರ್ಯಕರ್ತರು ಇರುತ್ತಾರೆ. ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ