Breaking News

ಈಶ್ವರಪ್ಪ ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ಬಗೆಹರಿಸಿಕೊಳ್ಳಬೇಕಿತ್ತು: ರೇಣುಕಾಚಾರ್ಯ ಕಿಡಿ

Spread the love

ಬೆಂಗಳೂರು: ಕೆ.ಎಸ್. ಈಶ್ವರಪ್ಪನವರಂತಹ ಹಿರಿಯ ಸಚಿವರೇ ಮುಖ್ಯಮಂತ್ರಿಗಳ ವಿರುದ್ದ ರಾಜ್ಯಪಾಲರಿಗೆ ಪತ್ರ ಬರೆಯುತ್ತಾರೆ ಎಂದರೆ ಹೇಗೆ? ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ಇದನ್ನು ಬಗೆ ಹರಿಸಿಕೊಳ್ಳಬೇಕಿತ್ತು ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ,

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಉಪಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಸಚಿವರು ಹೀಗೆ ಮಾಡಿರುವುದರಿಂದ ಚುನಾವಣೆ ಮೇಲೆ ಪರಿಣಾಮ ಬೀರಲ್ವಾ? ಪಕ್ಷದ ಇಮೇಜ್ ಹಾಳಾಗೋದಿಲ್ವಾ ಎಂದು ಅಸ‌ಮಾಧಾನ ವ್ಯಕ್ತಪಡಿಸಿದ್ದಾರೆ.

ನಾವು 60 ಮಂದಿ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅನುದಾನಕ್ಕೆ ಮನವಿ ಮಾಡಿದ್ದರಿಂದ ಅವರು ಬಿಡುಗಡೆ ಮಾಡಿದ್ದಾರೆ ಅದರಲ್ಲಿ ತಪ್ಪೇನು? ಅದಕ್ಕೂ ಮೊದಲು ಈಶ್ವರಪ್ಪನವರಿಗೂ ಭೇಟಿ ಮಾಡಿ ಮನವಿ ಮಾಡಿದ್ದೆವು. ಆದರೆ ಅವರು ಸ್ಪಂದಿಸಿರಲಿಲ್ಲ. ಹಾಗಾಗಿ ವಿಧಿಯಿಲ್ಲದೆ ಸಿಎಂರನ್ನು ಭೇಟಿ ಮಾಡಬೇಕಾಯ್ತು ಎಂದು ರೇಣುಕಾಚಾರ್ಯ ಹೇಳಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ