Breaking News
Home / ರಾಜ್ಯ / ಮಸ್ಕಿ ಉಪಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಪ್ರಚಾರ ಇಲ್ಲ: ಬಿಜೆಪಿ ಅಭ್ಯರ್ಥಿ ಸ್ಪಷ್ಟನೆ

ಮಸ್ಕಿ ಉಪಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಪ್ರಚಾರ ಇಲ್ಲ: ಬಿಜೆಪಿ ಅಭ್ಯರ್ಥಿ ಸ್ಪಷ್ಟನೆ

Spread the love

ರಾಯಚೂರು: ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಪತನವಾಗಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಬರಲು ಕಾರಣವಾದ ಮುಂಬೈ ಫ್ರೆಂಡ್ಸ್ ಎಂದು ಖ್ಯಾತರಾದ 17 ಜನ ಶಾಸಕರ ನೇತೃತ್ವ ವಹಿಸಿದ್ದ ರಮೇಶ್ ಜಾರಕಿಹೊಳಿ ಇದೀಗ ಸಿಡಿ ಪ್ರಕರಣದಲ್ಲಿ ಸಿಕ್ಕು ಒತ್ತಾಡುತ್ತಿದ್ದಾರೆ. ಈ ಗೊಂದಲ ಮಧ್ಯೆ ಬೆಳಗಾವಿ ಸಾಹುಕಾರ್ ಮಸ್ಕಿ ಬೈ ಎಲೆಕ್ಷನ್ ಪ್ರಚಾರದಿಂದ ದೂರ ಉಳಿಯುವ ಸಾಧ್ಯತೆ ಇದೆ. ರಮೇಶ್ ಜಾರಕಿಹೊಳಿ ಅವರು ಮಸ್ಕಿ ಉಪಚುನಾವಣೆಯಿಂದ ದೂರ ಉಳಿಯುತ್ತಾರೆ ಎಂದು ಸ್ವತಃ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಹೇಳಿದ್ದಾರೆ.

2018ರಲ್ಲಿ ಮೈತ್ರಿ ಸರ್ಕಾರ ರಚನೆ ಮಾಡಿದ್ದ ಕಾಂಗ್ರೆಸ್ ಹಾಗು ಜೆಡಿಎಸ್ ಪಕ್ಷಗಳಿಂದ 17 ಶಾಸಕರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಇದರಿಂದಾಗಿ 2019 ರಲ್ಲಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಪತನವಾಗಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಿದೆ. ಮುಂಬೈಗೆ ಶಾಸಕರು ಹಾರುವಾಗ ಮುಖಂಡತ್ವ ವಹಿಸಿಕೊಂಡಿದ್ದು ರಮೇಶ ಜಾರಕಿಹೊಳಿ. ಇವರ ನೇತೃತ್ವದಲ್ಲಿ ಶಾಸಕರು ಬಂಡಾಯ ಎದ್ದಾಗ ಮೊದಲು ಜೊತೆ ನೀಡಿದ್ದು ಮಸ್ಕಿಯ ಶಾಸಕರಾಗಿದ್ದ ಪ್ರತಾಪಗೌಡ ಪಾಟೀಲ. ಈ ಶಾಸಕರು ಅನರ್ಹಗೊಂಡ ನಂತರ 16 ಜನ ಶಾಸಕರ ಕ್ಷೇತ್ರದಲ್ಲಿ ಚುನಾವಣೆ ನಡೆದು ಎಂಟಿಬಿ ನಾಗರಾಜ ಹಾಗು ಹೆಚ್ ವಿಶ್ವನಾಥ ಮಾತ್ರ ಸೋಲು ಅನುಭವಿಸಿದ್ದಾರೆ. ರೋಷನ್ ಬೇಗ್ ಮತ್ತು ಆರ್ ಶಂಕರ್ ಸ್ಪರ್ಧೆ ಮಾಡಲಿಲ್ಲ. ಇನ್ನುಳಿದವರು ಗೆಲುವು ಸಾಧಿಸಿ ಮತ್ತೆ ವಿಧಾನಸಭೆ ಪ್ರವೇಶ ಮಾಡಿದ್ಧಾರೆ.ಈಗ ರಮೇಶ‌ ಜಾರಕಿಹೊಳಿಯವರ ಆಪ್ತರು ಹಾಗೂ ಸಂಬಂಧಿಯೂ ಆಗಿರುವ ಪ್ರತಾಪಗೌಡ ಪಾಟೀಲ ಅವರು ಪ್ರತಿನಿಧಿಸುವ ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಜಾರಕಿಹೊಳಿಯವರ ಸಿಡಿ ಪ್ರಕರಣ ನಡೆದಿದೆ. ಸಿಡಿ ಪ್ರಕರಣದ ಪರಿಣಾಮ ಮಸ್ಕಿ ಚುನಾವಣೆಯ ಮೇಲೆ ಬೀರುವ ಸಾಧ್ಯತೆ ಇದ್ದೇ ಇದೆ.


Spread the love

About Laxminews 24x7

Check Also

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

Spread the loveಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ