Breaking News

1ರಿಂದ 9 ತರಗತಿ : ಮೇ ತಿಂಗಳಲ್ಲಿ ಬೇಸಗೆ ರಜೆ ಸಾಧ್ಯತೆ

Spread the love

ಬೆಂಗಳೂರು: ರಾಜ್ಯದ 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ ಬೇಸಗೆ ರಜೆ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಚಿಂತನೆ ನಡೆಸುತ್ತಿದೆ.

ಬಿಸಿಲಿನ ತಾಪಮಾನ ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಪ್ರಿಲ್‌ ಅಂತ್ಯದೊಳಗೆ 9ನೇ ತರಗತಿ ವರೆಗಿನ ಎಲ್ಲ ವಿದ್ಯಾರ್ಥಿಗಳ ಪಠ್ಯಕ್ರಮ ಪೂರ್ಣಗೊಳಿಸಿ, ಮೌಲ್ಯಮಾಪನ ಪ್ರಕ್ರಿಯೆ ನಡೆಸಿ ರಜೆ ಘೋಷಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ.

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ವಿಳಂಬವಾಗಿ ಆರಂಭವಾಗಿದ್ದರಿಂದ ಬೇಸಗೆ ರಜೆ ಕಡಿತ ಮಾಡುವ ಬಗ್ಗೆ ಈ ಹಿಂದೆ ಇಲಾಖೆ ತೀರ್ಮಾನ ತೆಗೆದುಕೊಂಡಿತ್ತು. ಆದರೆ, ಬಿಸಿಲಿನ ತಾಪ ಮಾನದ ಜತೆಗೆ ಕೋವಿಡ್ ಎರಡನೇ ಅಲೆಯ ಆಂತಕವೂ ಹೆಚ್ಚುತ್ತಿರು ವುದರಿಂದ ನಿರ್ಧಾರ ಬದಲಾಯಿಸುವ ಬಗ್ಗೆ ಚಿಂತನೆ ನಡೆಯತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಎಸೆಸೆಲ್ಸಿಯವರಿಗೆ ಪರೀಕ್ಷೆ ರಜೆ :

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಬೇಸಗೆ ರಜೆ ಇರುವುದಿಲ್ಲ. ಬದಲಾಗಿ ಪಠ್ಯಕ್ರಮ ಪೂರ್ಣಗೊಳ್ಳುತ್ತಿದ್ದಂತೆ ಪರೀಕ್ಷೆಗೆ ಸಿದ್ಧತೆ ನಡೆಸಿಕೊಳ್ಳಲು ರಜೆ ನೀಡಲಾಗುತ್ತದೆ.

ಎಪ್ರಿಲ್‌ ಅಂತ್ಯ ಹಾಗೂ ಮೇ ತಿಂಗಳಲ್ಲಿ ಮಕ್ಕಳಿಗೆ ತರಗತಿ ನಡೆಸುವುದು ಕಷ್ಟ. ಹೀಗಾಗಿ ಮೇ ತಿಂಗಳಲ್ಲಿ ರಜೆ ಘೋಷಣೆ ಮಾಡುವ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ. ಶೀಘ್ರವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದೇವೆ. –ವಿ.ಅನ್ಬುಕುಮಾರ್‌, ಆಯುಕ್ತ, ಸಾರ್ವಜನಿಕ ಶಿಕ್ಷಣ ಇಲಾಖೆ


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ