Breaking News

ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

Spread the love

ಮಂಡ್ಯ: ದುಷ್ಕರ್ಮಿಗಳು ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ದಳವಾಯಿ ಕೋಡಿಹಳ್ಳಿ ಗ್ರಾಮದ ಮಧು(30) ಹತ್ಯೆಯಾದ ವ್ಯಕ್ತಿ. ಮಧು ನಿನ್ನೆ (ಬುಧವಾರ ಮಾ .31 ) ರಾತ್ರಿ ಗುಂಡಾಪುರದ ಕೊಂಡೋತ್ಸವ ಕಾರ್ಯಕ್ರಮಕ್ಕೆ ತೆರಳಲು ಗ್ರಾಮದ ತನ್ನ ಸ್ನೇಹಿತರ ಜತೆ ಮಾತನಾಡುತ್ತ ನಿಂತಿದ್ದಾಗ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಗಳು ಚಾಕುವಿನಿಂದ ಇರಿದು ಹಲ್ಲೆ ನಡೆಸಿ, ಬಳಿಕ ಆತನ ಕತ್ತಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಧುವನ್ನು ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಮಿಮ್ಸ್ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ಈ ಕುರಿತಾಗಿ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ.

 

ಹೆದ್ದಾರಿಯಲ್ಲಿ ಶವವಿಟ್ಟು ಪ್ರತಿಭಟನೆ

ಹತ್ಯೆಯಾದ ಮಧುವಿನ ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ಮೃತದೇಹವನ್ನು ಸ್ವಗ್ರಾಮಕ್ಕೆ ತರುವಾಗ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಜನತೆ ಮಧುವಿನ ಹತ್ಯೆಯ ಹಂತಕರನ್ನು ಶೀಘ್ರ ಬಂಧಿಸಬೇಕು ಎಂದು ಶವವನ್ನು ರಾಷ್ಟ್ರೀಯ ಹೆದ್ದಾರಿ-209ರ ಹಲಗೂರು ಮುಖ್ಯ ವೃತ್ತದಲ್ಲಿ ಇಟ್ಟು ಪ್ರತಿಭಟನೆ ನಡೆಸಿದರು.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ