Breaking News

ಪೊಲೀಸ್ ಧ್ವಜ ದಿನಾಚರಣೆ: ಔರಾದಕರ್ ವರದಿ ಜಾರಿಗೆ ಆಗ್ರಹ

Spread the love

ವಿಜಯಪುರ: ರಾಘವೇಂದ್ರ ಔರಾದಕರ್ ವರದಿಯನ್ನು ಸರ್ಕಾರ ತಕ್ಷಣ ಜಾರಿಗೊಳಿಸಬೇಕು ಎಂದು ನಿವೃತ್ತ ಪೊಲೀಸ್ ಅಧಿಕಾರಿ ಬಿ.ಪಿ.ಹುಲಸಗುಂದ ಆಗ್ರಹಿಸಿದರು.

ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಪೊಲೀಸ್ ಕಲ್ಯಾಣ ಮತ್ತು ಧ್ವಜ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಬೇಕು. ಈ ಮೂಲಕ ಪೊಲೀಸರನ್ನು ಒತ್ತಡ ಮುಕ್ತರನ್ನಾಗಿ ಮಾಡಬೇಕು. ಪೊಲೀಸರು ಬಿಡುವಿನ ವೇಳೆ ತಮ್ಮ ಕುಟುಂಬದ ಕಲ್ಯಾಣಕ್ಕೆ ಗಮನ ನೀಡಲು ಅವಕಾಶ ಲಭಿಸುವಂತೆ ಮಾಡಬೇಕು ಎಂದು ಮನವಿ ಮಾಡಿದರು.

ಪೊಲೀಸರು ನಿರಂತರ ಜನಸಂಪರ್ಕದಲ್ಲಿ ಇರಬೇಕು. ಅವರೊಂದಿಗೆ ಉತ್ತಮವಾಗಿ ನಡೆದುಕೊಳ್ಳಬೇಕು. ಯಾವುದೇ ರೀತಿಯ ಅಪರಾಧ ಪ್ರಕರಣಗಳು ನಡೆದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸ್ಪಂದಿಸಬೇಕು. ಆಗ ಜನರು ಪೊಲೀಸರ ಬಗ್ಗೆ ನಂಬಿಕೆ, ವಿಶ್ವಾಸ ಮೂಡುತ್ತದೆ ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್‌, ಪೊಲೀಸ್ ಕಲ್ಯಾಣ ನಿಧಿಗೆ ಸಾರ್ವಜನಿಕರು ತಮ್ಮ ಕೈಲಾದ ಸಹಾಯ ಮಾಡಬೇಕು ಎಂದರು.

ಸಾರ್ವಜನಿಕರಿಗೆ ಧ್ವಜಗಳನ್ನು ಮಾರಾಟ ಮಾಡುವ ಮೂಲಕ ಕಲ್ಯಾಣ ನಿಧಿಗೆ ಹಣ ಸಂಗ್ರಹಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿ.ಪಂ. ಸಿಇಒ ಗೋವಿಂದ ರೆಡ್ಡಿ, ಎಎಸ್ಪಿ ಡಾ.ರಾಮ ಅರಸಿದ್ಧಿ ಇದ್ದರು.

ಪೊಲೀಸ್ ಸಿಬ್ಬಂದಿಯಿಂದ ಆಕರ್ಷಕ ಪಥ ಸಂಚಲನ ನಡೆಯಿತು.


Spread the love

About Laxminews 24x7

Check Also

ಯತ್ನಾಳ್‌ ಆಕ್ರೋಶ ಬೆನ್ನಲ್ಲೇ ಬಿಜೆಪಿ ‘ವಕ್ಫ್ ತಂಡ’ ಪುನಾರಚನೆ

Spread the love ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಮಂಡಳಿಯು ಆಸ್ತಿ ವಶಕ್ಕಾಗಿ ರೈತರಿಗೆ ನೋಟಿಸ್‌ ನೀಡಿರುವ ಸಂಬಂಧ ಅಲ್ಲಿಗೆ ಭೇಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ