Breaking News

ಸಿದ್ದಗಂಗಾ ಶ್ರೀಗಳ ಸ್ಮರಿಸಿದ ಪ್ರಧಾನಿ ಮೋದಿ.. ಉದಾತ್ತ ಆಲೋಚನೆಗಳ ಸ್ವಾಮೀಜಿಗೆ ಶಿರಬಾಗಿ ನಮಿಸುವೆ ಎಂದ್ರು

Spread the love

ತುಮಕೂರು: ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಜಯಂತಿ ಪ್ರಯುಕ್ತ ಅವರನ್ನು ಸ್ಮರಿಸಿರುವ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಅಧಿಕೃತ ಟ್ವಿಟರ್​ ಖಾತೆಯ ಮುಖೇನ ಸ್ವಾಮೀಜಿಗಳಿಗೆ ನಮನ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ನರೇಂದ್ರ ಮೋದಿ, ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ಅವರ ಜಯಂತಿಯಂದು ಶಿರಬಾಗಿ ನಮಿಸುವೆ. ಸಮಾಜಕ್ಕೆ ಸ್ವಾಮಿಗಳು ಸಲ್ಲಿಸಿದ ಸೇವೆ, ಬಡವರ ಬಗೆಗಿನ ಅವರ ಕಾಳಜಿ ಸ್ಮರಣಾರ್ಹ. ಶಿವಕುಮಾರ ಸ್ವಾಮೀಜಿಯವರ ಉದಾತ್ತ ಆಲೋಚನೆ, ಆದರ್ಶಗಳಿಂದ ನಾವು ಸ್ಪೂರ್ತಿ ಪಡೆದಿದ್ದೇವೆ ಎಂದು ಹಂಚಿಕೊಂಡಿದ್ದಾರೆ. ಶಿವಕುಮಾರ ಸ್ವಾಮಿಗಳೊಂದಿಗಿನ ಭೇಟಿಯ ವೇಳೆ ತೆಗೆಸಿಕೊಂಡಿದ್ದ ಹಳೆಯ ಚಿತ್ರಗಳನ್ನು ಹಂಚಿಕೊಂಡಿರುವ ನರೇಂದ್ರ ಮೋದಿ, ತಾವು ಸ್ವಾಮಿಗಳಿಗೆ ತಲೆಬಾಗಿ ನಮಸ್ಕರಿಸುತ್ತಿರುವ ಫೋಟೋವನ್ನು ಟ್ವೀಟ್​ ಮಾಡಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ