Breaking News
Home / ಜಿಲ್ಲೆ / ಹಾಸನ / ವಿದ್ಯಾರ್ಥಿಯ ಭವಿಷ್ಯಕ್ಕೆ ಕೊಳ್ಳಿ ಇಟ್ಟ ಪ್ರಾಂಶುಪಾಲೆ

ವಿದ್ಯಾರ್ಥಿಯ ಭವಿಷ್ಯಕ್ಕೆ ಕೊಳ್ಳಿ ಇಟ್ಟ ಪ್ರಾಂಶುಪಾಲೆ

Spread the love

ಹಾಸನ: ವಿದ್ಯಾರ್ಥಿಗಳ ಹಿತ ಕಾಯಬೇಕಿದ್ದ ಮಹಿಳಾ ಪ್ರಾಂಶುಪಾಲರೊಬ್ಬರು ತಲೆ ತಗ್ಗಿಸುವಂತಹ ಕೆಲಸ ಮಾಡಿದ್ದು, ಗುರು-ಶಿಷ್ಯರ ಸಂಬಂಧಕ್ಕೆ ಮಸಿ ಬೆಳೆದಿದ್ದಾರೆ. ಉದ್ದೇಶ ಪೂರ್ವಕವಾಗಿಯೇ ವಿದ್ಯಾರ್ಥಿಯೊಬ್ಬನ ಉತ್ತರ ಪತ್ರಿಕೆಯ ಉತ್ತರಗಳನ್ನು ವಿರೂಪಗೊಳಿಸಿದ ಆರೋಪ ಕೇಳಿಬಂದಿದ್ದು, ಈ ಘಟನೆ ಹಾಸನ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ. ಈ ಸಂಬಂಧ ಪ್ರಾಂಶುಪಾಲೆ ಶೋಭಾದೇವಮಾನೆ ವಿರುದ್ಧ ಹಾಸನ ಬಡಾವಣೆ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ನೊಂದ ವಿದ್ಯಾರ್ಥಿ ಚನ್ನಯ್ಯ ನೀಡಿದ ದೂರಿನ ಆಧಾರದ ಮೇಲೆ ಎಫ್​ಐಆರ್​ ದಾಖಲಿಸಲಾಗಿದೆ.
ಕಾಲೇಜಿನ ಇತರೆ ವಿದ್ಯಾರ್ಥಿಗಳು ಹೇಳಿದಂತೆ ಚನ್ನಯ್ಯ ಒಳ್ಳೆಯ ವಿದ್ಯಾರ್ಥಿ. ಆತ ರ್ಯಾಂಕ್ ವಿದ್ಯಾರ್ಥಿ ಆಗಿದ್ದ. ಆದರೆ ನರ್ಸಿಂಗ್‌ ಪರೀಕ್ಷೆಯಲ್ಲಿ ತಾನು ಫೇಲ್ ಎಂದು ತಿಳಿದಾಗ ತುಂಬಾ ವಿಚಲಿತನಾಗಿದ್ದ. ಬಳಿಕ ತನ್ನ ಮೇಲಿನ ಅಚಲ ನಂಬಿಕೆಯಿಂದ ಏನೋ ತಪ್ಪು ನಡೆದಿದೆ ಎಂಬ ಸಂಶಯದಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಉತ್ತರ ಪತ್ರಿಕೆ ತರಿಸಿ ನೋಡಿದಾಗ ಪ್ರಕರಣ ಬಯಲಾಗಿದೆ. ಉತ್ತರ ಪತ್ರಿಕೆಯನ್ನು ಸ್ಕ್ಯಾನ್ ಮಾಡಿ ಕಳಿಸುವಾಗ ಜೂನಿಯರ್ ವಿದ್ಯಾರ್ಥಿಯಿಂದ ಶೋಭಾ ದೇವಮಾನೆ ಕೃತ್ಯ ಎಸಗಿದ್ದಾರೆ. ಪ್ರಿನ್ಸಿಪಾಲ್ ಆದೇಶದಂತೆ ಈ ಕೃತ್ಯ ಎಸಗಿದ್ದಾಗಿ ಆರೋಪಿ ವಿದ್ಯಾರ್ಥಿ ಈಗಾಗಲೇ ಒಪ್ಪಿಕೊಂಡಿದ್ದಾನೆ.


Spread the love

About Laxminews 24x7

Check Also

ಅಜಾನ್ ವಿರುದ್ಧ ಜೂನ್ 1ರಿಂದ ಮತ್ತೆ ಹೋರಾಟ: ಮುತಾಲಿಕ್

Spread the love ಹಾಸನ, ಮೇ 22: “ಅಜಾನ್ ವಿಷಯದಲ್ಲಿ ಸರ್ಕಾರ ದೃಢ ನಿಲುವಿನೊಂದಿಗೆ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ