Breaking News

ಮೊಬೈಲ್‌ನಲ್ಲೇ ಕಾಲ ಕಳೆಯುತ್ತಿದ್ದ ಶಿಕ್ಷಕಿ ವಿರುದ್ದ ದೂರು ನೀಡಿದ 6ನೇ ತರಗತಿ ವಿದ್ಯಾರ್ಥಿನಿ.! ಮುಂದೆನಾಯ್ತು?

Spread the love

ತುಮಕೂರು/ ಮಧುಗಿರಿ: ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡುವ ಬದಲು ಸದಾ ಕಾಲ ಮೊಬೈಲ್‌ನಲ್ಲೇ ಕಾಲ ಕಳೆಯುತ್ತಿದ್ದ ಶಿಕ್ಷಕಿ ವಿರುದ್ದ 6ನೇ ತರಗತಿ ವಿದ್ಯಾರ್ಥಿನಿ ದೂರು ನೀಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪುರವರದಲ್ಲಿ ನಡೆದಿದೆ.

ಪುರವರ ಗ್ರಾಮದ ರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ ವೈಷ್ಣವಿ . ಶಾಲೆಯ ಶಿಕ್ಷಕಿಯರು ತಮ್ಮ ಸಣ್ಣ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬಂದು ಅವರ ಲಾಲನೆ ಪಾಲನೆ ಮಾಡುವಂತೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹಾಕುತ್ತಿದ್ದು, ಇದಲ್ಲದೇ ಮೊಬೈಲ್ ನೋಡುತ್ತಾ ಪಾಠ ಮಾಡದೇ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ತಿಳಿಸುತ್ತಿದ್ದಾರೆ ಅಂತ ಆರೋಪಿಸಿದ್ದಾರೆ. ಈ ವಿಚಾರದ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗೆ ಪರಿಹಾರ ಕೊಡಿಸುವಂತೆ ಸಂಸ್ಥೆಯ ಅಧ್ಯಕ್ಷ ಸಿದ್ದಲಿಂಗೇಗೌಡರಿಗೆ ಪತ್ರ ಬರೆದಿದ್ದಾರೆ. ವಿದ್ಯಾರ್ಥಿನಿಯ ಪತ್ರಕ್ಕೆ ಸ್ಪಂದಿಸಿರುವ ಸಿದ್ದಲಿಂಗೇಗೌಡರು ಜಿಲ್ಲಾಧಿಕಾರಿ, ಮಧುಗಿರಿ ಉಪವಿಭಾಗಾಧಿಕಾರಿ, ಡಿಡಿಪಿಐ, ಜಿಪಂಸಿಇಒ ಹಾಗೂ ಬಿಇಒ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ