Breaking News

ನನ್ನ ಕಾರಿನ ಮೇಲೆ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ: ರಾಕೇಶ್ ಟಿಕಾಯತ್

Spread the love

ಜೈಪುರ, ಎ. 2: ಭಾರತೀಯ ಕಿಸಾನ್ ಒಕ್ಕೂಟ (ಬಿಕೆಯು)ದ ನಾಯಕ ರಾಕೇಶ್ ಟಿಕಾಯತ್ ಅವರ ವಾಹನ ವ್ಯೆಹದ ಮೇಲೆ ರಾಜಸ್ಥಾನದ ಅಲವರ್ ಜಿಲ್ಲೆಯ ತಾತರ್‌ಪುರ ಗ್ರಾಮದಲ್ಲಿ ಶುಕ್ರವಾರ ದಾಳಿ ನಡೆದಿದೆ. ಈ ದಾಳಿಯಿಂದ ಟಿಕಾಯತ್ ಅವರ ಕಾರಿನ ಕಿಟಕಿಯ ಗಾಜು ಒಡೆದಿದೆ ಎಂದು ತಿಳಿದು ಬಂದಿದೆ. ರಾಕೇಶ್ ಟಿಕಾಯತ್ ಅವರ ವಾಹನ ಅಲವಾರ್‌ನ ಹರಸೋರಾ ಗ್ರಾಮದಿಂದ ಬಾನಸೂರ್‌ಗೆ ಸಂಚರಿಸುತ್ತಿದ್ದ ಸಂದರ್ಭ ಈ ದಾಳಿ ನಡೆದಿದೆ. ಹರಸೋರಾದಲ್ಲಿ ರೈತರ ಸಭೆ ಉದ್ದೇಶಿಸಿ ಮಾತನಾಡಿದ ಬಳಿಕ ರಾಕೇಶ್ ಟಿಕಾಯತ್ ಅವರು ಬಾನಸೂರ್‌ಗೆ ತೆರಳುತ್ತಿದ್ದರು. ಹಾನಿಗೀಡಾದ ಕಾರಿನ ವೀಡಿಯೊವನ್ನು ಟ್ವಿಟ್ಟರ್‌ನಲ್ಲಿ ಅಪ್‌ಲೋಡ್ ಮಾಡಿರುವ ರಾಕೇಶ್ ಟಿಕಾಯತ್, ಬಿಜೆಪಿ ಗೂಂಡಾಗಳು ಈ ದಾಳಿ ನಡೆಸಿದ್ದಾರೆ ಎಂದಿದ್ದಾರೆ. ”ರಾಜಸ್ಥಾನದ ಅಲವಾರ ಜಿಲ್ಲೆಯ ತಾತರ್‌ಪುರದ ಬಾನಸೂರ್ ರಸ್ತೆಯಲ್ಲಿ ಬಿಜೆಪಿಯ ಗೂಂಡಾಗಳು ದಾಳಿ ನಡೆಸಿದ್ದಾರೆ. ಇದು ಪ್ರಜಾಪ್ರಭುತ್ವದ ಸಾವು” ಎಂದು ಟಿಕಾಯತ್ ಟ್ವೀಟ್ ಮಾಡಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ