Breaking News

ವೇತನ ಹೆಚ್ಚಳ ಬಗ್ಗೆ ಸಿಹಿ ಸುದ್ದಿ ನೀಡಿದ ಡಿಸಿಎಂ ಸವದಿ

Spread the love

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನವನ್ನು ಸೋಮವಾರ ಹೆಚ್ಚಳಮಾಡುವ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಕೆಎಸ್‌ಆರ್ಟಿಸಿ ನೌಕರರ ತರಬೇತಿ ಕೇಂದ್ರ ಆವರಣದಲ್ಲಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಉದ್ಘಾಟಿಸಿ ಮಾತನಾಡಿದ ಅವರು, ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಾರಿಗೆ ನೌಕರರ ಸಂಘಟನೆಗಳ ಪ್ರಮುಖರ ಜೊತೆ ಚರ್ಚೆ ನಡೆಸಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಸೋಮವಾರ ಹಣಕಾಸು ಇಲಾಖೆ ಹಾಗೂ ಸಿಎಂ ಜೊತೆ ಮತ್ತೊಮ್ಮೆ ಚರ್ಚೆ ನಡೆಸಿ ನಿರ್ಧಾರ ತಿಳಿಸಲಾಗುವುದು ಎಂದು ಹೇಳಿದ್ದಾರೆ.

ಸಾರಿಗೆ ನೌಕರರು ಹೋರಾಟ ನಡೆಸಲು ತಮ್ಮ ವಿರೋಧವಿಲ್ಲ. ಅವರ ಬೇಡಿಕೆಗಳನ್ನು ಈಡೇರಿಸಲಾಗುವುದು. ಆದರೆ, ಕೇಳುತ್ತಿರುವ ಸಮಯ ಸರಿಯಿಲ್ಲ. ನೌಕರರ ಕಷ್ಟ ನಮಗೂ ಗೊತ್ತಿದೆ. 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಲಾಗಿದೆ. ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ