Breaking News

7 ಗಂಟೆಗಳ ಕಾಲ ವಿಚಾರಣೆ ಎದುರಿಸಿ ಮತ್ತೆ ಅಜ್ಞಾತ ಸ್ಥಳಕ್ಕೆ CD ಯುವತಿ

Spread the love

ಬೆಂಗಳೂರು: CD ಪ್ರಕರಣದ ಸಂತ್ರಸ್ತ ಯುವತಿಯ ಇಂದಿನ ವಿಚಾರಣೆ ಅಂತ್ಯವಾಗಿದೆ. ಸಂತ್ರಸ್ತೆ ಇಂದು ಮಧ್ಯಾಹ್ನ 12.30ರ ವೇಳೆಗೆ ಆಡುಗೋಡಿಯ ಟೆಕ್ನಿಕಲ್​ ಸೆಲ್​ನಲ್ಲಿ ವಿಚಾರಣೆಗೆ ಹಾಜರಾಗಿದ್ದು, ಎಸ್​ಐಟಿಯ ಎಸಿಪಿ ಕವಿತಾ ವಿಚಾರಣೆ ನಡೆಸಿದ್ದಾರೆ.

ಪ್ರಕರಣ ಸಂಬಂಧ ನಿನ್ನೆ ಯುವತಿ ಈ ಹಿಂದೆ ವಾಸವಿದ್ದ ಸ್ಥಳ ಹಾಗೂ ಮಂತ್ರಿ ಗ್ರೌಡ್ಸ್​​ ಅಪಾರ್ಟ್​ಮೆಂಟ್​ನಲ್ಲಿ ಸ್ಥಳ ಮಹಜರು ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು, ಪ್ರಮುಖ ವಸ್ತುಗಳನ್ನು ವಶಕ್ಕೆ ಪಡೆದಿದ್ದರು. ಈ ಸಂಬಂಧ ಇಂದು ಅಧಿಕಾರಿಗಳು ಯುವತಿಯನ್ನು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ಸುಮಾರು 7 ಗಂಟೆಗಳ ಕಾಲ ವಿಚಾರಣೆ ನಡೆಸಿದ ಎಸ್​ಐಟಿ ಅಧಿಕಾರಿಗಳು, ಅಗತ್ಯ ಬಿದ್ದರೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಭದ್ರತೆಯಲ್ಲಿ ಅಜ್ಞಾತ ಸ್ಥಳಕ್ಕೆ ಕಳುಹಿಸಿಕೊಟ್ಟಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ