Breaking News

ಸರಳವಾಗಿ ಸ್ವಾತಂತ್ರ್ಯೋತ್ಸವ ಅಚರಣೆಗೆ ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ

Spread the love

ನವದೆಹಲಿ, ಜು.24-ದೇಶದಾದ್ಯಂತ ಕೊರೊನಾ ವೈರಸ್ ಹಾವಳಿ ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದ್ದು, ಆಗಸ್ಟ್ 15ರ ಸ್ವಾತಂತ್ರೋತ್ಸವ ದಿನಾಚರಣೆ ಸಡಗರ-ಸಂಭ್ರಮಕ್ಕೆ ಅಡ್ಡಿಯಾಗಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಸುತ್ತೋಲೆಗಳನ್ನು ಹೊರಡಿಸಿ ಅತ್ಯಂತ ಸರಳವಾಗಿ ಮತ್ತು ಜಾಗ್ರತೆಯಿಂದ ರಾಷ್ಟ್ರ ಹಬ್ಬ ಆಚರಿಸುವಂತೆ ತಿಳಿಸಿದೆ.

ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಸ್ವಾತಂತ್ರ ದಿನಾಚರಣೆಯಂದು ಅನುಸರಿಸಬೇಕಾದ ಕ್ರಮಗಳ ಕುರಿತು ವಿಶೇಷ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಅತಿ ಹೆಚ್ಚು ಜನರು ಸೇರಬಾರದು. ಅತ್ಯಂತ ಸರಳವಾಗಿ ಮತ್ತು ಮುಂಜಾಗ್ರತಾ ಕ್ರಮಗಳೊಂದಿಗೆ ರಾಷ್ಟ್ರೀಯ ಹಬ್ಬ ಆಚರಿಸಲಬೇಕು. ಸಾಮಾಜಿಕ ಅಂತರ ಕಾಯ್ಸುಕೊಳ್ಳುವಿಕೆ, ಸ್ಯಾಬಿಟೈಸರ್ ಬಳಕೆ, ಮತ್ತು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ

ಆಗಸ್ಟ್ 15ರಂದು ವೈದ್ಯರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಕೊರೊನಾ ವಾರಿಯರ್ಸ್‍ಗಳಿಗೆ ಆಹ್ವಾನ ನೀಡಿ. ಡೆಡ್ಲಿ ಕೋವಿಡ್-19 ವೈರಸ್ ರೋಗದಿಂದ ಗುಣಮುಖರಾದವರನ್ನು ಈ ಸರಳ ಕಾರ್ಯಕ್ರಮಕ್ಕೆ ಆಮಂತ್ರಿಸಿ ಎಂದು ತಿಳಿಸಲಾಗಿದೆ.

ಈ ಬಾರಿ ರಾಜ್ಯ ಸರ್ಕಾರದಿಂದ ಅದ್ದೂರಿ ಸ್ವಾತಂತ್ರ ದಿನಾಚರಣೆ ಬದಲು ಸರಲ ರೀತಿಯಲ್ಲಿ ರಾಷ್ಟ್ರೀಯ ಹಬ್ಬ ನಡೆಯಲಿದೆ. ಆಯಾ ರಾಜ್ಯಗಳ ರಾಜ್ಯಪಾಲರು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗೌರ್ನರ್‍ಗಳು ರಾಜ್ಯಭವನದಿಂದಲೇ ಭಾಷಣ ಮಾಡಲಿದ್ದಾರೆ. ಅವರ ಭಾಷಣವನ್ನು ನೇರ ಪ್ರಸಾರ ಮಾಡಲಾಗುತ್ತದೆ.


Spread the love

About Laxminews 24x7

Check Also

ಪ್ರಜಾಪ್ರಭುತ್ವ ಉಳಿವಿಗೆ ದೇಶದ ಜನ ಒಂದಾಗಿ: ಮಲ್ಲಿಕಾರ್ಜುನ ಖರ್ಗೆ

Spread the love ನವದೆಹಲಿ: ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನ ಉಭಯ ಸದನಗಳಿಂದ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇದು ಕೇಂದ್ರ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ