Breaking News
Home / ರಾಜ್ಯ / ಹಳ್ಳಿಯಲ್ಲಿ ಚಂದಾ ಎತ್ತಿ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಹೊಡೆಸಿದ ಶಿಕ್ಷಕರು

ಹಳ್ಳಿಯಲ್ಲಿ ಚಂದಾ ಎತ್ತಿ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಹೊಡೆಸಿದ ಶಿಕ್ಷಕರು

Spread the love

ಚಿಕ್ಕಮಗಳೂರು: ಸರ್ಕಾರಿ ಶಾಲೆ ಇಂದೋ, ನಾಳೆಯೋ ಎನ್ನುತ್ತಿದೆ ಹೀಗೆ ಬಿಟ್ಟರೆ ಆಗುವುದಿಲ್ಲ ಎಂದು ಹಳ್ಳಿಗರ ಸಹಕಾರದಲ್ಲಿ ಶಿಕ್ಷಕರು ಗ್ರಾಮಸ್ಥರ ನೆರವಿನಿಂದ ಪ್ರತಿ ಮನೆಯಿಂದ ಚಂದಾ ಎತ್ತಿ ಸರ್ಕಾರಿ ಶಾಲೆಗೆ ಹೊಸ ರೂಪ ನೀಡಿದ್ದಾರೆ. ತಾಲೂಕಿನ ಗಡಿಗ್ರಾಮ ಸಿರಿಬಡಿಗೆ ಶಾಲೆಯೇ ಶಿಕ್ಷಕರಿಂದ ಮರುಜನ್ಮ ಪಡೆದ ಶಾಲೆ. 1 ರಿಂದ 7ನೇ ತರಗತಿವರೆಗಿನ ಈ ಶಾಲೆಯಲ್ಲಿ ಪ್ರಸ್ತುತ 48 ಮಕ್ಕಳಿದ್ದಾರೆ. ಕೊರೊನಾ ಬಳಿಕ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಸುಮಾರು 20 ಮಕ್ಕಳು ಈಗ ಈ ಶಾಲೆಗೆ ಸೇರಿದ್ದಾರೆ. ಎಂಟು ಕೊಠಡಿಗಳಿವೆ. ಆದರೆ ಶಾಲೆಯ ಮೇಲ್ಛಾವಣಿ ಸಂಪೂರ್ಣ ಹಾಳಾಗಿತ್ತು. ಹೆಂಚುಗಳೂ ಒಡೆದು ಹೋಗಿದ್ದವು. ಶಾಲೆ ಕಳೆದ ಎಂಟು ವರ್ಷಗಳಿಂದ ಸುಣ್ಣ-ಬಣ್ಣ ಕಂಡಿರಲಿಲ್ಲ. ಹಾಗಾಗಿ ಸಿ.ಆರ್.ಪಿ. ಹಾಗೂ ಎಸ್.ಡಿ.ಎಂ.ಸಿ. ಮೀಟಿಂಗ್‍ನಲ್ಲಿ ಶಿಕ್ಷಕರು ಹಾಗೂ ಗ್ರಾಮಸ್ಥರು ಮಾತುಕತೆಯಲ್ಲಿ ಶಾಲೆಗೆ ಹೊಸ ರೂಪ ನೀಡಿಲು ತೀರ್ಮಾನ ಕೈಗೊಂಡಿದ್ದಾರೆ.

ಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ತೀರ್ಮಾನದಂತೆ ಶಾಲೆಗೆ ಪುನರ್ಜನ್ಮ ಸಿಕ್ಕಿದೆ. ಊರಿನ ಮುಖಂಡರು ನಾವು ನಮ್ಮ ಕೈಲಾದ ಸಹಾಯ ಮಾಡುತ್ತೇವೆ. ನಮ್ಮೂರ ಶಾಲೆ ನಮ್ಮೂರ ದೇವಸ್ಥಾನವಿದ್ದಂತೆ ಎಂದು ಹಳ್ಳಿಗರು ಸಂಪೂರ್ಣ ಬೆಂಬಲ ನೀಡಿದ ಪರಿಣಾಮ ಅವನತಿಯ ಅಂಚಿನಲ್ಲಿದ್ದ ಸರ್ಕಾರಿ ಶಾಲೆ ಇಂದು ಮಧುವಣಗಿತ್ತಿಯಂತೆ ಕಂಗೊಳಿಸುತ್ತಿದೆ. ಗ್ರಾಮದಲ್ಲಿ ಚಂದಾ ಎತ್ತಿದ ಹಣದಿಂದ ಶಾಲೆಯ ಮೇಲ್ಛಾವಣಿ ದುರಸ್ತಿ ಮಾಡಿ ಇಡೀ ಶಾಲೆಗೆ ಬಣ್ಣ ಹೊಡೆಸಿ ಮಕ್ಕಳು ಕೂರಲು ಕುರ್ಚಿ-ಮೇಜಿನ ವ್ಯವಸ್ಥೆ ಮಾಡಿದ್ದಾರೆ. ಶಿಕ್ಷಕರಿಗೆ ಮಕ್ಕಳು ಹಾಗೂ ಶಾಲೆ ಮೇಲಿರೋ ಪ್ರೀತಿಗೆ ಸ್ಥಳೀಯರು ಕೂಡ ಅವರ ಕಾರ್ಯಕ್ಕೆ ಕೈಜೋಡಿದ್ದಾರೆ.ಎರಡೇ ಗಂಟೆಗೆ 35 ಸಾವಿರ ಸಂಗ್ರಹ : ಊರಿನ ಮುಖಂಡರ ಜೊತೆ ಗ್ರಾಮದಲ್ಲಿ ಹೊರಟ ಶಿಕ್ಷಕರಿಗೆ ಹಳ್ಳಿಯ ಸಹೃದಯಿಗಳು ಎರಡೇ ಗಂಟೆಗೆ 35 ಸಾವಿರ ಹಣ ನೀಡಿದ್ದಾರೆ. ಯಾರ ಮನೆ ಬಾಗಿಲಿಗೆ ಹೋದರೂ ಯಾರೂ ಕೂಡ ಬರಿಗೈಲಿ ಕಳಿಸಿಲ್ಲ.

ತಮ್ಮ ಶಕ್ತಿಗನುಸಾರವಾಗಿ 100 ರಿಂದ 1000 ರೂಪಾಯಿವರೆಗೆ ಹಣ ನೀಡಿದ್ದಾರೆ. ಕೆಳಗಿನ ಸಿರಿಬಡಿಗೆ, ಮೇಲಿನ ಸಿರಿಬಡಿಗೆ ಎರಡೂ ಏರಿಯಾವನ್ನೂ ಸುತ್ತುವಷ್ಟರಲ್ಲಿ ಗ್ರಾಮಸ್ಥರ ಕೈಯಲ್ಲಿ 35 ಸಾವಿರ ಹಣವಿತ್ತು. ಆ ಹಣವನ್ನ ಗ್ರಾಮಸ್ಥರು ಶಿಕ್ಷಕರು ಕೈಗೆ ನೀಡಿದ್ದಾರೆ. ಆ ಹಣಕ್ಕೆ ಶಿಕ್ಷಕರು ತಾವೂ ಒಂದಿಷ್ಟು ಹಣ ಸೇರಿಸಿ ಶಾಲೆಗೆ ಹೊಸ ಭಾಷ್ಯ ಬರೆದಿದ್ದಾರೆ.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ