ಬೆಂಗಳೂರು, ಏ.3- ಕದ್ದ ಬೈಕ್‍ಗಳನ್ನು ಮಾರಾಟ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಕಲಾಸಿಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿ 60 ಸಾವಿರ ಬೆಲೆಯ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ವಿಲ್ಸನ್ ಗಾರ್ಡನ್ ನಿವಾಸಿ ಶೋಯಬ್ ಫಜಲ್ (19) ಬಂಧಿತ ಆರೋಪಿ.
ನಿನ್ನೆ ಕಲಾಸಿಪಾಳ್ಯ ಠಾಣಾ ವ್ಯಾಪ್ತಿಯ ಎಎಂ ರಸ್ತೆಯಲ್ಲಿ ಸಿಬ್ಬಂದಿ ಗಸ್ತಿನಲ್ಲಿದ್ದಾಗ ದ್ವಿಚಕ್ರ ವಾಹನವನ್ನು ಮಾರಾಟ ಮಾಡಲು ವ್ಯಕ್ತಿಯೊಬ್ಬ ಪ್ರಯತ್ನಿಸುತ್ತಿ ದ್ದಾನೆಂಬ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ವಿಚಾರಿಸಿದಾಗ ಬೈಕ್ ಕಳ್ಳತನ ಮಾಡಿರುವುದು ಗೊತ್ತಾಗಿದೆ.
ಇನ್ಸ್‍ಪೆಕ್ಟರ್ ಚಂದ್ರಕಾಂತ್ ತನಿಖೆ ಮುಂದುವರಿಸಿ ಆರೋಪಿಯ ವಿಚಾರಣೆ ನಡೆಸಿ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
Laxmi News 24×7