Breaking News

ಸಿಡಿ ಪ್ರಕರಣದಲ್ಲಿ ರೋಚಕ ತಿರುವು, ಮಾಜಿ ಸಚಿವ ಡಿ. ಸುಧಾಕರ್ ಸಿಡಿ ಯುವತಿ ಜತೆ ನಂಟು

Spread the love

ಬೆಂಗಳೂರು: ಬಿಜೆಪಿ ಶಾಸಕ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ರೋಚಕ ತಿರುವು ದೊರೆತಿದೆ. ಮಾಜಿ ಸಚಿವ ಡಿ. ಸುಧಾಕರ್ ಸಿಡಿ ಯುವತಿ ಜತೆ ಅತಿ ಹೆಚ್ಚು ಬಾರಿ ಫೋನ್​ನಲ್ಲಿ ಮಾತನಾಡಿರುವುದು ಎಸ್​ಐಟಿ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ. ಚಿತ್ರದುರ್ಗ ಮೂಲದ ಡಿ. ಸುಧಾಕರ್ ಈ ಹಿಂದೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಸಿಡಿ ಬಿಡುಗಡೆಗೂ ಎರಡು ದಿನ ಮುನ್ನ ಸಿಡಿ ಪ್ರಕರಣದಲ್ಲಿ ಇದ್ದಾಳೆ ಎನ್ನುವ ಯುವತಿ ಬಳಿ ಡಿ.ಸುಧಾಕರ್ ಹಣದ ವ್ಯವಹಾರ ನಡೆಸಿರುವ ಬಗ್ಗೆ ತನಿಖೆ ವೇಳೆ ಸುಳಿವು ದೊರೆತಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಮಾಜಿ ಸಚಿವ ಡಿ.ಸುಧಾಕರ್​ಗೆ ನೋಟಿಸ್​​ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ಮೂಲಗಳು ತಿಳಿಸಿವೆ.

ಮಾಜಿ ಸಚಿವ ಡಿ ಸುಧಾಕರ್ ಚಿತ್ರದುರ್ಗ ಮೂಲದವರು. 2004ರಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಅವರು, 2008ಮತ್ತು 2013ರಲ್ಲಿ ಹಿರಿಯೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಅಲ್ಲೂ ಗೆದ್ದಿದ್ದರು. ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಅವರು ಕಾರ್ಯನಿರ್ವಹಿಸಿದ್ದರು. ಸದ್ಯ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ