ಅಥಣಿ: ಕೊರೊನಾ ಸೋಂಕಿನಿಂದ ಮೃತಪಟ್ಟ ಟೆಕ್ಕಿಯ ಅಂತ್ಯಸಂಸ್ಕಾರವನ್ನು ತಾಲೂಕಾಡಳಿತ ಕೋವಿಡ್ ಮಾರ್ಗಸೂಚಿ ಪ್ರಕಾರ ನಿನ್ನೆ ತಡರಾತ್ರಿ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ನೆರವೇರಿಸಿದೆ.

ಲಂಡನ್ ನಲ್ಲಿ ನೆಲೆಸಿದ್ದ ಖಾಸಗಿ ಕಂಪನಿಲ್ಲಿ ಇಂಜಿನೀಯರ್ ಆಗಿ ಕೆಲಸ ಮಾಡುತ್ತಿದ್ದ ಟಿಕ್ಕಿ. ಜನೇವರಿ 15 ರಂದು ಅಥಣಿಗೆ ಮರಳಿದ್ದ . ಲಾಕ್ ಡೌನ್ ಹಿನ್ನೆಲೆಯಲ್ಲಿ ವರ್ಕ್ ಫ್ರಮ್ ಹೋಮ್ ಮೂಲಕ ಕೆಲಸ ಮಾಡುತ್ತಿದ್ದ. ತೀವ್ರ ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸುವ ಮುನ್ನ ಮೃತಪಟ್ಟಿದ್ದ. ಕೊರೊನಾ ವರದಿ ಪಾಸಿಟಿವ್ ಬಂದಿದೆ.
ಮೃತ ಸೋಂಕಿತ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ 8 ಜನ ಮತ್ತು ದ್ವಿತೀಯ ಸಂಪರ್ಕ ಹೊಂದಿದ್ದ 12 ಜನರನ್ನು ಕ್ವಾರಂಟೈನ್ ಗೊಳಪಡಿಸಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಮುತ್ತಪ್ಪ ಕೊಪ್ಪದ ಮಾಹಿತಿ ನೀಡಿದ್ದಾರೆ.
Laxmi News 24×7