Breaking News
Home / ಅಂತರಾಷ್ಟ್ರೀಯ / ಮಕ್ಕಳ ಆನ್‍ಲೈನ್ ಶಿಕ್ಷಣಕ್ಕಾಗಿ ಮಾರಿದ ಹಸುವನ್ನು ವಾಪಸ್ ಕೊಡಿಸುವೆ: ಸೋನು ಸೂದ್

ಮಕ್ಕಳ ಆನ್‍ಲೈನ್ ಶಿಕ್ಷಣಕ್ಕಾಗಿ ಮಾರಿದ ಹಸುವನ್ನು ವಾಪಸ್ ಕೊಡಿಸುವೆ: ಸೋನು ಸೂದ್

Spread the love

ಶಿಮ್ಲಾ: ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದೆಂದು ತಾನು ಸಾಕಿದ ಹಸುವನ್ನೇ ಮಾರಿ ಆನ್‍ಲೈನ್ ಶಿಕ್ಷಣಕ್ಕಾಗಿ ಮೊಬೈಲ್ ಕೊಡಿಸಿದ ಸುದ್ದಿ ಭಾರೀ ವೈರಲ್ ಆಗುತ್ತಿದೆ. ಸದಾ ಮಾನವೀಯತೆಯ ಮೂಲಕ ರಿಯಲ್ ಲೈಫ್‍ನಲ್ಲಿ ಹೀರೋ ಆಗಿರೋ ಬಾಲಿವುಡ್ ನಟ ಸೋನು ಸೂದ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಹೌದು. ಹಸು ಮಾರಿದ ತಂದೆಯ ಸುದ್ದಿಗೆ ಟ್ವೀಟ್ ಮಾಡಿರುವ ಸೋನು ಸೂದ್, ಆನ್‍ಲೈನ್ ಶಿಕ್ಷಣಕ್ಕಾಗಿ ಮಾರಿದ ಹಸುವನ್ನು ಮಕ್ಕಳ ತಂದೆಗೆ ವಾಪಸ್ ಕೊಡಿಸುತ್ತೇನೆ. ಸದ್ಯ ನಂಗೆ ಅವರ ಬಗ್ಗೆ ಹೆಚ್ಚಿನ ಮಾಹಿತಿ ಯಾರಾದರೂ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ನಟ ಈ ರೀತಿ ಮನವಿ ಮಾಡಿಕೊಳ್ಳುತ್ತಿದ್ದಂತೆಯೇ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಮೊದಲು ಅಂದರೆ ಲಾಕ್‍ಡೌನ್ ಸಮಯದಲ್ಲಿ ಹಲವಾರು ಪ್ರವಾಸಿ ಕಾರ್ಮಿಕರನ್ನು ಅವರವರ ಊರಿಗೆ ತಲುಪಿಸುವ ಕಾರ್ಯ ಮಾಡಿದ್ದರು. ಅಲ್ಲದೆ 400ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಿದ್ದರು. ಇತ್ತೀಚೆಗೆ ಮಹಾರಾಷ್ಟ್ರ ಪೊಲೀಸರಿಗೆ 25 ಸಾವಿರ ಫೇಸ್ ಶೀಲ್ಡ್ ನೀಡುವ ಮೂಲಕ ಅನೇಕ ಮಾನವೀಯ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದಾರೆ.

ಇದೀಗ ಹಸು ವಾಪಸ್ ಮಾಡುತ್ತೇನೆ ಎಂದು ಬಡ ಕುಟುಂಬದ ಬೆನ್ನಿಗೆ ನಿಂತಿರುವ ನಟನ ಪೋಸ್ಟ್ ಗೆ ಹಲವಾರು ಕಮೆಂಟ್ ಗಳು ಬಂದಿವೆ. ಒಬ್ಬ ನಟ ಏಕಾಂಗಿಯಾಗಿ ನಮ್ಮ ದೇಶದ ಬಡ ಕುಟುಂಬಗಳಿಗೆ ಸಹಾಯ ಮಾಡುತ್ತಿದ್ದಾರೆ. ಅಂತೆಯೇ ದೇಶದಲ್ಲಿರುವ ಎಲ್ಲಾ ರಾಜಕೀಯ ವ್ಯಕ್ತಿಗಳಿಂದ ಎಷ್ಟು ಇಂತಹ ಮಾನವೀಯ ಕೆಲಸಗಳು ಆಗಬಹುದು ಎಂದು ನೀವೇ ಊಹಿಸಿಕೊಳ್ಳಿ. ಸೋನು ಸೂದ್ ಅವರು ಮಾಡುತ್ತಿರುವ ಕೆಲಸಕ್ಕೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಲು ಇಷ್ಟಪಡುತ್ತೇನೆ. ದೇವರು ನಿಮಗೆ ಹೆಚ್ಚಿನ ಆರೋಗ್ಯ ಹಾಗೂ ಸಂಪತ್ತನ್ನು ಕರುಣಿಸಲಿ. ನಿಮ್ಮಿಂದ ಇನ್ನಷ್ಟು ಒಳ್ಳೆಯ ಕಾರ್ಯಗಳು ಆಗಲಿ. ಜೈ ಹಿಂದ್ ಸರ್ ಎಂದು ಒಬ್ಬರು ಬರೆದುಕೊಂಡಿದ್ದಾರೆ. ಇನ್ನೊಬ್ಬರು ಈ ಕಾರಣಕ್ಕಾಗಿಯೇ ನಾನು ಈ ವ್ಯಕ್ತಿಯನ್ನು ತುಂಬಾ ಇಷ್ಟಪಡುತ್ತಿದ್ದೇನೆ ಎಂದು ಕಮೆಂಟ್ ಮಾಡಿದ್ದಾರೆ.

ಏನಿದು ಘಟನೆ:
ಕೋವಿಡ್ 19 ಲಾಕ್‍ಡೌನ್ ಪರಿಣಾಮ ಶಾಲೆಯ ಮಕ್ಕಳಿಗೆ ಆನ್‍ಕ್ಲಾಸ್ ಆರಂಭಿಸಲಾಗುತ್ತಿದೆ. ಆದರೆ ಹಿಮಾಚಲ ಪ್ರದೇಶದಲ್ಲಿ ಕಡು ಬಡ ಕುಟುಂಬದ ಕುಲ್ದೀಪ್ ಕುಮಾರ್ ತನ್ನ ಮಕ್ಕಳು ಇತರರಂತೆ ಓದಬೇಕು ಎಂದು ತಾನು ಸಾಕಿದ್ದ ಹಸುವನ್ನೇ ಮಾರಿ 6 ಸಾವಿರ ರೂ. ಕೊಟ್ಟು ಮೊಬೈಲ್ ಖರೀದಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಕುಲ್ದೀಪ್, ನನ್ನ ಮಕ್ಕಳು ಆನ್‍ಲೈನ್ ತರಗತಿಗೆ ಹಾಜರಾಗಲು ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಲು ನನ್ನ ಕೈಯಲ್ಲಿ ಸಾಧ್ಯವಿರಲಿಲ್ಲ. ಹೀಗಾಗಿ ನಾನು ಸಾಕಿದ್ದ ಹಸುವನ್ನು ಮಾರಲು ನಿರ್ಧರಿಸಿದೆ. ಅಲ್ಲದೆ 6 ಸಾವಿರ ರೂಪಾಯಿಗೆ ಹಸುವನ್ನು ಮಾರಿಬಿಟ್ಟೆ ಎಂದು ಕುಮಾರ್ ಗದ್ಗದಿತರಾಗಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ