Breaking News

ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿ ಎಂಟು ಮಂದಿ ಯೋಧರು ಹುತಾತ್ಮ, 18 ಯೋಧರು ನಾಪತ್ತೆ!

Spread the love

ಛತ್ತೀಸ್ ಗಢ್: ಇಲ್ಲಿನ ಸುಕ್ಮಾ- ಬಿಜಾಪುರ ಗಡಿ ಪ್ರದೇಶದಲ್ಲಿ ಶನಿವಾರ ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿಎಂಟು ಮಂದಿ ಯೋಧರು ಹುತಾತ್ಮರಾಗಿದ್ದು, 18 ಮಂದಿ ಯೋಧರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಶನಿವಾರ ಸಿಆರ್‌ಪಿಎಫ್ ನ ಕೋಬ್ರಾ ಪಡೆ, ವಿಶೇಷ ಕಾರ್ಯಾಚರಣೆ ಪಡೆ, ಜಿಲ್ಲಾ ಮೀಸಲು ಗಾರ್ಡ್ಸ್‌ನ 2 ಸಾವಿರ ಸಿಬ್ಬಂದಿ ಛತ್ತೀಸ್‌ಗಡದ ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಜಾಗರ್‌ಗುಂಡಾ ಠಾಣೆ ವ್ಯಾಪ್ತಿಯಲ್ಲಿ ನಕ್ಸಲರು ಪಡೆಗಳನ್ನು ಗುರಿಯಾಗಿರಿಸಿಕೊಂಡು ಗುಂಡು ಹಾರಿಸಿದ್ದಾರೆ. ನಂತರ ಭದ್ರತಾ ಪಡೆಗಳೂ ಪ್ರತಿ ದಾಳಿ ನಡೆಸಿವೆ.

ರಾಯಪುರದಿಂದ 400 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದೆ. ಇದುವರೆಗೆ ಎಂಟು ಮಂದಿ ಯೋಧರು ಮೃತಪಟ್ಟಿದ್ದಾರೆ ಎಂದು ನಕ್ಸಲ್‌ ಕಾರ್ಯಾಚರಣೆಯ ಡಿಜಿ ಅಶೋಕ್ ಜುನೇಜಾ ಅವರು ಮಾಹಿತಿ ನೀಡಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸ್ ಗಢ್ ಸಿಎಂ ಗೆ ಕರೆ ಮಾಡಿ ಪರಿಸ್ಥಿತಿಯ ಬಗ್ಗ ಮಾಹಿತಿ ಪಡೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಶನಿವಾರ ಟ್ವೀಟ್ ಮಾಡಿ, ಗಾಯಗೊಂಡ ಭದ್ರತಾ ಸಿಬ್ಬಂದಿಯ ಶೀಘ್ರ ಗುಣಮುಖರಾಗಲು ಹಾರೈಸಿದ್ದಾರೆ. ಅಲ್ಲದೆ, ಮಾವೋವಾದಿಗಳ ವಿರುದ್ಧದ ಹೋರಾಟದಲ್ಲಿ ಮಡಿದ ಯೋಧರ ಕುಟುಂಬದ ಜತೆ ನಾವಿರುತ್ತೇವೆಂದು ಟ್ವೀಟ್​ ಮೂಲಕ ಧೈರ್ಯ ತುಂಬಿದ್ದಾರೆ.


Spread the love

About Laxminews 24x7

Check Also

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

Spread the loveನವದೆಹಲಿ: ಗದಗ ಯಲವಿಗಿ ರೈಲು ಯೋಜನೆ ಡಿಪಿಆರ್‌ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ