Breaking News

ಸಪ್ಲಾಯರ್ ಕೆಲಸ ಮಾಡಿಲ್ಲ. ಹೀಗಾಗಿ ಸಪ್ಲೈಯರ್ ಗಳಿಂದ ನಾನು ಏನನ್ನೂ ಕಲಿಯಬೇಕಿಲ್ಲ ಎಂದು ಕಿಡಿ‌ ಕಾರಿದ ಯತ್ನಾಳ

Spread the love

ವಿಜಯಪುರ: ಮಂತ್ರಿಯಾಗಲು, ಎಂಎಲ್ ಸಿ ಆಗಲು ಅಶ್ಲೀಲ ಸಿಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುವವರಿಂದ ನಾನು ಕಲಿಯಬೇಕಾದುದು ಏನೂ ಇಲ್ಲ ಎಂದು ಬಸನಗೌಡ ಪಾಟೀಲ ಯತ್ನಾಳ ಮತ್ತೆ ಹರಿ ಹಾಯ್ದಿದ್ದಾರೆ.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು ಎಂದು ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು.

 

ಮಂತ್ರಿ ಆಗಲು ನಾನು ಯಾರಿಗೂ ಹಣ ಕೊಟ್ಟಿಲ್ಲ, ಯಾರ ಕೈಕಾಲು ಹಿಡಿದಿಲ್ಲ. ಸಪ್ಲಾಯರ್ ಕೆಲಸ ಮಾಡಿಲ್ಲ. ಹೀಗಾಗಿ ಸಪ್ಲೈಯರ್ ಗಳಿಂದ ನಾನು ಏನನ್ನೂ ಕಲಿಯಬೇಕಿಲ್ಲ ಎಂದು ಕಿಡಿ‌ ಕಾರಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ