Breaking News
Home / ಜಿಲ್ಲೆ / ಬೆಂಗಳೂರು / ರಾಜ್ಯದಲ್ಲಿ 4,553 ಹೊಸ ಸೋಂಕು ಪ್ರಕರಣ ದಾಖಲು

ರಾಜ್ಯದಲ್ಲಿ 4,553 ಹೊಸ ಸೋಂಕು ಪ್ರಕರಣ ದಾಖಲು

Spread the love

ಬೆಂಗಳೂರು: ಬೆಂಗಳೂರು: ರಾಜ್ಯದಲ್ಲಿ ಸತತ ಐದನೇ ದಿನ ಕೂಡ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, 24 ಗಂಟೆಗಳ ಅವಧಿಯಲ್ಲಿ 4,553 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 39,092ಕ್ಕೆ ತಲುಪಿದೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿದ್ದು, 7 ಜಿಲ್ಲೆಗಳಲ್ಲಿ ಮೂರಂಕಿ ತಲುಪಿದೆ. ಬೆಂಗಳೂರಿನಲ್ಲಿ ಮತ್ತೆ 2,787 ಮಂದಿ ಸೋಂಕಿತರಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4.47 ಲಕ್ಷ ದಾಟಿದೆ. ಮೈಸೂರು (260), ಕಲಬುರ್ಗಿ (170), ಬೆಂಗಳೂರು ಗ್ರಾಮಾಂತರ (155), ಬೀದರ್ (147), ತುಮಕೂರು (107), ಹಾಸನ (104), ಧಾರವಾಡ (100) ಜಿಲ್ಲೆಯಲ್ಲಿ ಅಧಿಕ ‍ಪ್ರಕರಣಗಳು ವರದಿಯಾಗಿವೆ.

ಕೋವಿಡ್ ಪೀಡಿತರಲ್ಲಿ ಮತ್ತೆ 15 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 8 ಮಂದಿ, ಕಲಬುರ್ಗಿಯಲ್ಲಿ 3 ಮಂದಿ, ಧಾರವಾಡದಲ್ಲಿ ಇಬ್ಬರು, ತುಮಕೂರು ಮತ್ತು ಹಾಸನದಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ಈವರೆಗೆ ಮೃತಪಟ್ಟವರ ಸಂಖ್ಯೆ 12,625ಕ್ಕೆ ತಲುಪಿದೆ. ಸದ್ಯ ಸೋಂಕು ದೃಢ ಪ್ರಮಾಣ ಶೇ 3.79 ರಷ್ಟಿದೆ. 331 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೋವಿಡ್ ಪರೀಕ್ಷೆಗಳ ಸಂಖ್ಯೆ ಕೂಡ ಏರಿಕೆ ಕಂಡಿದೆ.

ಒಂದು ದಿನದ ಅವಧಿಯಲ್ಲಿ 1.19 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಕೊರೊನಾ ಸೋಂಕಿತರಲ್ಲಿ 2,060 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 9.63 ಲಕ್ಷ ದಾಟಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ