Breaking News

ನಿಜವಾಗಿಯೂ ಸಂತ್ರಸ್ತ ನನ್ನ ಕಕ್ಷಿದಾರ: ರಮೇಶ್ ಜಾರಕಿಹೊಳಿ ಪರ ವಕೀಲ

Spread the love

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಕಕ್ಷಿದಾರ ನಿಜವಾಗಿಯೂ ಸಂತ್ರಸ್ತ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ವಕೀಲ ಶ್ಯಾಮ್ ಸುಂದರ್ ಹೇಳಿದ್ದಾರೆ.

ಇಂದುಮಾತನಾಡುತ್ತಾ ಅತ್ಯಾಚಾರ ಕೇಸ್‍ನ ತನಿಖೆ ಸರಿಯಾಗಿ ತನಿಖೆ ಆಗ್ತಿಲ್ಲ. ಪೊಲೀಸ್ ಆಯುಕ್ತರಿಗೆ ಯುವತಿ ಬರೆದಿರುವ ಪತ್ರದ ಕುರಿತು ಪ್ರತಿಕ್ರಿಯಿಸಿ, ಶ್ಯಾಮ್ ಸುಂದರ್ ಆಕ್ಷೇಪ ವ್ಯಕ್ತಪಡಿಸಿದರು. ಯುವತಿ ಸುಳ್ಳು ಆರೋಪ ಮತ್ತು ಸುಳ್ಳು ದೂರು ಕೊಡ್ತಿದ್ದಾರೆ. ನಿಜವಾಗಿಯೂ ಸಂತ್ರಸ್ತ ನನ್ನ ಕಕ್ಷಿದಾರ ಎಂದು ತಿಳಿಸಿದ್ದಾರೆ.

ಇದೊಂದು ಪೂರ್ವಯೋಜಿತ ಕೃತ್ಯ. ತನಿಖಾಧಿಕಾರಿಗಳ ದಿಕ್ಕು ತಪ್ಪಿಸುವ ಯತ್ನ ನಡೆಯುತ್ತಿದೆ. ಸುಳ್ಳು ದೂರುಗಳ ವಿರುದ್ಧ ಕಾನೂನು ಹೋರಾಟ ಮಾಡ್ತೇವೆ ಎಂದು ಹೇಳಿದ್ದಾರೆ. ಇದನ್ನೂ

 

ಕಳೆದ ಬಾರಿ ವಿಚಾರಣೆಗೆ ಕರೆಯುವಾಗ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರು ಗೋಕಾಕ್ ಆಸ್ಪತ್ರೆಗೆ ಹೋಗಿದ್ದು, ವಿಚಾರಣೆಯಿಂದ ತಪ್ಪಿಸಿಕೊಂಡಿಲ್ಲ. ಆ ಬಳಿಕ ತನಿಖಾಧಿಕಾರಿಗಳು ವಿಚಾರಣೆಗೆ ಬರುವಂತೆ ನೋಟಿಸ್ ಕೊಟ್ಟಿಲ್ಲ. ನೋಟಿಸ್ ಕೊಟ್ಟು ಕರೆದರೆ ಅವರು ಖಂಡಿತವಾಗಿಯೂ ಬರುತ್ತಾರೆ. ಆಸ್ಪತ್ರೆಗೆ ಯಾರಾದರೂ ಸುಮ್ ಸುಮ್ನೆ ಹೋಗ್ತಾರಾ. ಅದೂ ಸರ್ಕಾರಿ ಆಸ್ಪತ್ರೆಗೆ ಹೋಗಿರೋದು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ