Breaking News

ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್

Spread the love

ಬೆಂಗಳೂರು : ಜ್ವರದಿಂದ ಗುಣಮುಖರಾದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಣಿಪಾಲ್ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾದರು. ವೈದ್ಯರಾದ ಡಾ.ಸುದರ್ಶನ್ ಬಲ್ಲಾಳ್, ಸತ್ಯನಾರಾಯಣ ಮೈಸೂರು ಮಾಜಿ ಪ್ರಧಾನಿ ದೇವೇಗೌಡರಿಗೆ ಶುಭಕೋರಿದರು.

ದೇವೇಗೌಡರು ಮಾ.31 ರಂದು ಆಸ್ಪತ್ರೆ ದಾಖಲಾಗಿದ್ದರು. ಕೊರೊನಾ ಸೋಂಕು ದೃಢಪಟ್ಟಿರುವ ಅವರ ಪತ್ನಿ ಚೆನ್ನಮ್ಮ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮೊನ್ನೆ ಮಾರ್ಚ್ 31ರಂದು ಹೆಚ್ ಡಿ ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮರಿಗೆ ಜ್ವರ, ಉಸಿರಾಟದಲ್ಲಿ ಏರುಪೇರು ಕಂಡುಬಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.


Spread the love

About Laxminews 24x7

Check Also

ಯುದ್ಧದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್.ಅಶೋಕ್

Spread the loveಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ  ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ