ಕೊಡಗು : ಪೊನ್ನಂಪೇಟೆ ತಾಲೂಕಿನ ನಾಕೂರು ಸಮೀಪದ ಮುಗುಚಿಕೇರಿ ಗ್ರಾಮದಲ್ಲಿ ಕುಡಿದ ಅಮಲಿನಲ್ಲಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ 7 ಜನರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯ ಶವ ಕಾಫಿ ತೋಟವೊಂದರಲ್ಲಿ ಪತ್ತೆಯಾಗಿದೆ.
ಏಪ್ರಿಲ್ 3 ಕ್ಕೆ ಮುಗುಚಿಕೇರಿ ಗ್ರಾಮದಲ್ಲಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆರು ಜನರನ್ನು ಕೊಲೆ ಮಾಡಿದ್ದ ಆರೋಪಿ ಎರವರ ಜೋಜ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಕೂರು ನರೇಶ್ ಎಂಬುವರ ಕಾಫಿ ತೋಟದಲ್ಲಿ ಇಂದು ಬೆಳಗ್ಗೆ ಬೋಜನ ಮೃತದೇಹ ಪತ್ತೆಯಾಗಿದೆ. ಈತ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪವಾಗಿದೆ.
ಪತ್ನಿ ಹಾಗೂ ಇತರ 6 ಮಂದಿ ಅಳಿಯನ ಮನೆಯಲ್ಲಿ ಮಲಗಿದ್ದ ವೇಳೆ ಮನೆಯ ಬಾಗಿಲು ಹಾಕಿಕೊಂಡು ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ. ಆರೋಪಿ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈನಡುವೆ ಬೋಜನ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆ ನಡೆದ ದಿನವೇ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
Laxmi News 24×7